ಉಡುಪಿ: ನಾಲ್ವರು ಕೋವಿಡ್‌ಗೆ ಪಾಸಿಟಿವ್

Update: 2021-12-23 14:01 GMT

ಉಡುಪಿ, ಡಿ.23: ಗುರುವಾರ ನಾಲ್ಕು ಮಂದಿ ಕೋವಿಡ್-19 ಸೋಂಕಿಗೆ ಪಾಸಿಟಿವ್ ಬಂದಿದ್ದಾರೆ. ಇಬ್ಬರು ಮಾತ್ರ ಇಂದು ಸೋಂಕಿನಿಂದ ಮುಕ್ತರಾದರೆ ಸೋಂಕಿಗೆ ಚಿಕಿತ್ಸೆಯಲ್ಲಿರುವವರ ಸಂಖ್ಯೆ 28ಕ್ಕೇರಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.

ದಿನದಲ್ಲಿ ಪಾಸಿಟಿವ್ ಬಂದ ನಾಲ್ವರಲ್ಲಿ ತಲಾ ಇಬ್ಬರು ಪುರುಷರು ಹಾಗೂ ಮಹಿಳೆಯರಾಗಿದ್ದು, ಇವರೆಲ್ಲರೂ ಉಡುಪಿ ತಾಲೂಕಿಗೆ ಸೇರಿದವರು. ಎಲ್ಲಾ ನಾಲ್ವರನ್ನು ಅವರವರ ಮನೆಯಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇಂದು ಸಹ ಜಿಲ್ಲೆಯಲ್ಲಿ ಸೋಂಕಿಗೆ ಯಾರೂ ಬಲಿಯಾಗಿಲ್ಲ.

ಬುಧವಾರ ಇಬ್ಬರು ಗುಣಮುಖರಾಗುವ ಮೂಲಕ ಕೊರೋನದಿಂದ ಈವರೆಗೆ ಚೇತರಿಸಿಕೊಂಡವರ ಸಂಖ್ಯೆ 76,489ಕ್ಕೇರಿದೆ. ನಿನ್ನೆ ಜಿಲ್ಲೆಯಲ್ಲಿ 3960 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಈವರೆಗೆ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ 76,995ಕ್ಕೇರಿದೆ.

2714 ಮಂದಿಗೆ ಲಸಿಕೆ: ಜಿಲ್ಲೆಯಲ್ಲಿ ಗುರುವಾರ ಒಟ್ಟು 2,714 ಮಂದಿ ಕೋವಿಡ್ ಲಸಿಕೆ ಸ್ವೀಕರಿಸಿದ್ದಾರೆ. ಇವರಲ್ಲಿ 407 ಮಂದಿ ಮೊದಲ ಡೋಸ್ ಹಾಗೂ 2307 ಮಂದಿ ಎರಡನೇ ಡೋಸ್ ಸ್ವೀಕರಿಸಿದ್ದಾರೆ ಎಂದು ಡಿಎಚ್‌ಓ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.

ಲಸಿಕೆ ಪಡೆದವರಲ್ಲಿ 18 ವರ್ಷದಿಂದ 44 ವರ್ಷದೊಳಗಿನ 250 ಮಂದಿ ಮೊದಲ ಡೋಸ್ ಹಾಗೂ 1392 ಮಂದಿ ಎರಡನೇ ಡೋಸ್ ಲಸಿಕೆಯನ್ನು ಸ್ವೀಕರಿಸಿದರೆ, 45 ವರ್ಷ ಮೇಲಿನ 157 ಮಂದಿ ಮೊದಲ ಡೋಸ್ ಹಾಗೂ 914 ಮಂದಿ ಎರಡನೇ ಡೋಸ್ ಪಡೆದಿದ್ದಾರೆ. ಇವರೊಂದಿಗೆ ಒಬ್ಬ ಆರೋಗ್ಯ ಕಾರ್ಯಕರ್ತರು ಲಸಿಕೆ ಸ್ವೀಕರಿಸಿದವರಲ್ಲಿ ಸೇರಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News