ಡಿ.27: ಗಂಜಿಮಠದಲ್ಲಿ ’ಸರ್ವಧರ್ಮ ಸಾಮೂಹಿಕ ವಿವಾಹ’ ಕಾರ್ಯಕ್ರಮ

Update: 2021-12-23 17:16 GMT

ಮಂಗಳೂರು, ಡಿ.23:ಆರ್ಥಿಕವಾಗಿ ತೀರಾ ಹಿಂದುಳಿದಿರುವ ಕುಟುಂಬದ ಹೆಣ್ಮಕ್ಕಳ ಮದುವೆಗೆ ಪ್ರೋತ್ಸಾಹ ನೀಡುವ ಸಲುವಾಗಿ ಝಾರಾ ಚಾರಿಟೆಬಲ್ ಫೌಂಡೇಶನ್ ವತಿಯಿಂದ 15 ಜೋಡಿಗಳ ‘ಸರ್ವಧರ್ಮ ಸಾಮೂಹಿಕ ವಿವಾಹ’ ಕಾರ್ಯಕ್ರಮವು ಡಿ. 27ರಂದು ಬೆಳಗ್ಗೆ 10ಕ್ಕೆ ಮಂಗಳೂರು-ಮೂಡುಬಿರಿರೆ ರಾ.ಹೆ.ಯ ಗಂಜಿಮಠದಲ್ಲಿ ನಿರ್ಮಾಣಗೊಂಡಿರುವ ’ಝಾರಾ ಕನ್ವೆಂಶನ್ ಸೆಂಟರ್’ ಸಭಾಂಗಣದಲ್ಲಿ ನಡೆಯಲಿದೆ ಎಂದು ಝಾರಾ ಚಾರಿಟೆಬಲ್ ಫೌಂಡೇಶನ್ ಅಧ್ಯಕ್ಷಬಿ. ಝಕರಿಯಾ ಜೋಕಟ್ಟೆ ತಿಳಿಸಿದ್ದಾರೆ.

ಗುರುವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಶ್ರೀಕ್ಷೇತ್ರ ಧರ್ಮಸ್ಥಳ ಹೊರತು ಪಡಿಸಿದರೆ ದ.ಕ. ಜಿಲ್ಲೆಯಲ್ಲಿ ಮೊದಲ ಬಾರಿಗೆ ನಡೆಯಲಿರುವ ಸರ್ವದರ್ಮ ಸಾಮೂಹಿಕ ವಿವಾಹ ಕಾರ್ಯಕ್ರಮ ಇದಾಗಿದೆ. ವಧುವಿಗೆ ಮದುವೆ ವಸ್ತ್ರ ಖರೀದಿಗೆ ನಗದು ನೀಡಲಾಗಿದೆ. ವರನಿಗೆ ಮದುವೆ ವಸ್ತ್ರ, ವಾಚು ಮತ್ತು ನಗದು ಉಡುಗೊರೆ ಹಾಗೂ ವಧುವಿಗೆ ಚಿನ್ನದ ಆಭರಣವನ್ನು ಝಾರಾ ಚಾರಿಟೆಬಲ್ ಫೌಂಡೇಶನ್ ವತಿಯಿಂದ ನೀಡಲಾಗುವುದು ಎಂದರು.

ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಬೆಂಗಳೂರಿನ ಅವಧೂತ ವಿನಯ ಗುರೂಜಿ, ದ.ಕ.ಜಿಲ್ಲಾ ಖಾಝಿ ತ್ವಾಕಾ ಅಹ್ಮದ್ ಮುಸ್ಲಿಯಾರ್, ಉಡುಪಿ ಜಿಲ್ಲಾ ಖಾಝಿ ಎಂ. ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ, ಗುರುಪುರ ಕೈಕಂಬದ ಅವರ್ ಲೇಡಿ ಆಫ್ ಪಾಂಪೈ ಚರ್ಚಿನ ಧರ್ಮಗುರು ಫಾ. ಆಂಟನಿ ಲೋಬೊ ಉದ್ಘಾಟಿಸಲಿದ್ದಾರೆ. ಝಾರಾ ಚಾರಿಟೆಬಲ್ ಫೌಂಡೇಶನ್‌ ಅಧ್ಯಕ್ಷ ಬಿ. ಝಕರಿಯಾಜೋಕಟ್ಟೆ ಅಧ್ಯಕ್ಷತೆ ವಹಿಸಲಿದ್ದಾರೆ.

ಯೆನೆಪೊಯಾ ವಿವಿಯ ಕುಲಪತಿ ವೈ. ಅಬ್ದುಲ್ಲಕುಂಞಿ. ಆಳ್ವಾಸ್ ಶಿಕ್ಷಣ ಪ್ರತಿಷ್ಟಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವಾ, ಎ.ಜೆ. ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಎ.ಜೆ.ಶೆಟ್ಟಿ, ಶ್ರೀದೇಇ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಎ. ಸದಾನಂದ ಶೆಟ್ಟಿ, ಕಣಚೂರು ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಯು.ಕೆ. ಮೋನು, ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್, ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ, ಮುಡಾ ಅಧ್ಯಕ್ಷ ರವಿಶಂಕರ್ ಮಿಜಾರು, ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ನಾರಾಯಣ ಗುರು ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ನವೀನ್‌ ಚಂದ್ರ ಡಿ. ಸುವರ್ಣ, ಮುಸ್ಲಿಮ್ ಸೆಂಟ್ರಲ್ ಕಮಿಟಿಯ ಅಧ್ಯಕ್ಷ ಕೆ.ಎಸ್. ಮುಹಮ್ಮದ್ ಮಸೂದ್, ಎಸಿಪಿ ಮಹೇಶ್ ಕುಮಾರ್, ಉಳ್ಳಾಲ ದರ್ಗಾ ಅಧ್ಯಕ್ಷ ಅಬ್ದುಲ್ ರಶೀದ್. ಬೆಂಗಳೂರು ಹಮೀದ್ ಶಾ ಕಾಂಪ್ಲೆಕ್ಸ್‌ನ ಅಧ್ಯಕ್ಷ ಜಿ.ಎ. ಬಾವಾ, ಅಭಿಮಾನ್ ಸಮೂಹ ಸಂಸ್ಥೆಗಳ ಅಧ್ಯಕ್ಷ ಡಾ.ಉಮ್ಮರ್ ಬಿ.ಎಂ., ರೋಟರಿ ಜಿಲ್ಲಾಧ್ಯಕ್ಷ ಕೆ. ರವೀಂದ್ರ ಭಟ್, ಲಯನ್ಸ್ ಜಿಲ್ಲಾ ಗವರ್ನರ್ ವಸಂತ ಶೆಟ್ಟಿ, ಬಿಸಿಸಿಐ ಅಧ್ಯಕ್ಷ ಎಸ್.ಎಂ. ರಶೀದ್ ಹಾಜಿ, ಜಿಲ್ಲಾ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮಿಥುನ್‌ ರೈ, ಬಜ್ಪೆ ಇನ್‌ಸ್ಪೆಕ್ಟರ್ ಸಂದೇಶ್ ಪಿ.ಜಿ., ಬಲವಂಡಿ ಮುಕ್ಕಾಲ್ದಿ ಬಾಲಕೃಷ್ಣ ಬಿ.ಶೆಟ್ಟಿ ಅಲಿಕೆ ಗುತ್ತು, ಹಿದಾಯಾ ಫೌಂಡೇಶನ್‌ನ ಅಧ್ಯಕ್ಷ ಮನ್ಸೂರ್ ಅಹ್ಮದ್ ಆಝಾದ್, ವೈಟ್ ಸ್ಟೋನ್ ಬಿಲ್ಡರ್ಸ್‌ನ ಆಡಳಿತ ನಿರ್ದೇಶಲ್ ಬಿ.ಎಂ.ಶರೀಫ್, ನಂಡೊ ಪೆಂಙಲ್ ಅಧ್ಯಕ್ಷ ಬಿ.ಎಂ. ಮುಮ್ತಾಝ್ ಅಲಿ, ಟ್ಯಾಲೆಂಟ್ ರಿಸರ್ಚ್ ಫೌಂಡೇಶನ್ ಅಧ್ಯಕ್ಷ ಅಬ್ದುಲ್ ರವೂಫ್ ಪುತ್ತಿಗೆ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಝಾರಾ ಕನ್ವೆಂಶನ್ ಸೆಂಟರ್‌ನ ನಿರ್ದೇಶಕರಾದ ಝಹೀರ್ ಝಕರಿಯಾ ನಝೀರ್ ಝಕರಿಯಾ, ಝಾಹಿದ್ ಝಕರಿಯಾ, ವಿವಾಹ ಸಂಘಟನಾ ಸಮಿತಿಯ ಸಂಚಾಲಕರಾದ ಉಮರ್ ಯು.ಎಚ್., ನೌಶಾದ್ ಹಾಜಿ ಸೂರಲ್ಪಾಡಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News