ಜನೌಷಧಿ ಮಳಿಗೆಗಳನ್ನು ಪ್ರಾರಂಭಿಸಲು ಅರ್ಹರಿಂದ ಅರ್ಜಿ ಆಹ್ವಾನ

Update: 2021-12-24 17:03 GMT

ಬೆಂಗಳೂರು, ಡಿ.24: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಜೆನೆರಿಕ್ ಔಷಧಿಗಳನ್ನು ಜನೌಷಧಿ ಮಳಿಗೆಗಳನ್ನು ಪ್ರಾರಂಭಿಸಲು ಅರ್ಹರಿಂದ ಅರ್ಜಿ ಆಹ್ವಾನಿಸಿದೆ. 

ಸರಕಾರೇತರ ಸಂಸ್ಥೆಗಳು, ದತ್ತಿ ಸಂಸ್ಥೆಗಳು, ನಿರುದ್ಯೋಗಿ ಯುವಕರು ಹಾಗೂ ಪದವಿ ಫಾರ್ಮಾಸಿಸ್ಟ್ ಅರ್ಜಿ ಅರ್ಹರಾಗಿದ್ದು, ಅಗತ್ಯ ದಾಖಲೆಗಳೊಂದಿಗೆ ಮುಖ್ಯ ಆರೋಗ್ಯಾಧಿಕಾರಿ(ಸಾರ್ವಜನಿಕ ಆರೋಗ್ಯ) ಅವರ ಕಚೇರಿ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಎನ್.ಆರ್.ಚೌಕ, ಬೆಂಗಳೂರು-560002 ಈ ವಿಳಾಸಕ್ಕೆ ಡಿ.27ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News