ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರವೀಣ್ ಶೆಟ್ಟಿ ನಿಧನ

Update: 2021-12-25 15:57 GMT
ಪ್ರವೀಣ್ ಶೆಟ್ಟಿ

ಉಡುಪಿ, ಡಿ.25: ಕಾಪು ಉತ್ತರ ವಲಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರವೀಣ್ ಶೆಟ್ಟಿ ಕೊರಂಗ್ರಪಾಡಿ (55) ಅಲ್ಪಕಾಲದ ಅನಾರೋಗ್ಯದಿಂದ ಇಂದು ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾದರು.

ಇವರು ಅಲೆವೂರು ಗ್ರಾಪಂ ಸದಸ್ಯರಾಗಿ ಹಾಗೂ ಕೊರಂಗ್ರಪಾಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು.

ಈ ಹಿಂದೆ ಉಡುಪಿ ತಾಲೂಕು ಪಂಚಾಯತ್ ಸದಸ್ಯರಾಗಿ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಸೇವೆ ಸಲ್ಲಿಸಿದ್ದರು. ಮೃತರು ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಮತ್ತು ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

ಅವರ ನಿಧನಕ್ಕೆ ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ, ಪ್ರಮೋದ್ ಮಧ್ವರಾಜ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ದಿನೇಶ್ ಪುತ್ರನ್, ದಿವಾಕರ್ ಕುಂದರ್, ನರಸಿಂಹಮೂರ್ತಿ, ರಮೇಶ್ ಕಾಂಚನ್, ಹರೀಶ್ ಕಿಣಿ, ಸದಾಶಿವ ಕಟ್ಟೆಗುಡ್ಡೆ, ಅಲೆವೂರು ಗ್ರಾಪಂ ಅಧ್ಯಕ್ಷೆ ಪುಷ್ಪಾ ಅಂಚನ್, ಉಪಾಧ್ಯಕ್ಷ ಸುಧಾಕರ ಪೂಜಾರಿ ಸಂತಾಪ ವ್ಯಕ್ತಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News