ಕಾಪುಪುರಸಭೆ ಚುನಾವಣೆ: ನಿಷೇಧಾಜ್ಞೆ

Update: 2021-12-26 12:47 GMT

ಉಡುಪಿ, ಡಿ.26: ಕಾಪು ಪುರಸಭೆ ವ್ಯಾಪ್ತಿಯಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಾಗೂ ಗ್ರಾಪಂಗಳ ಉಪಚುನಾವಣೆ ಹಿನ್ನೆಲೆಯಲ್ಲಿ ಮತದಾನ ಕೇಂದ್ರಗಳ ಸುತ್ತಮುತ್ತ 100 ಮೀಟರ್ ವ್ಯಾಪ್ತಿಯಲ್ಲಿ ಸಿಆರ್‌ಪಿಸಿ ಕಲಂ 144ರನ್ವಯ ನಿಷೇಧಾಜ್ಞೆಯನ್ನು ವಿಧಿಸಿ ಜಿಲ್ಲಾಧಿಕಾರಿ ಕೂರ್ಮಾರಾವ್ ಆದೇಶ ನೀಡಿದ್ದಾರೆ.

ಕಾಪು ಪುರಸಭೆ ಹಾಗೂ ಉಡುಪಿ ತಾಲೂಕಿನ ತೋನ್ಸೆ ಗ್ರಾಪಂ, ಕಾಪು ತಾಲೂಕಿನ ಕೋಟೆ ಗ್ರಾಪಂ ಮತ್ತು ಬ್ರಹ್ಮಾವರ ತಾಲೂಕಿನ ನಾಲ್ಕೂರು ಗ್ರಾಪಂ ವ್ಯಾಪ್ತಿಯಲ್ಲಿ ಗ್ರಾಪಂ ಉಪಚುನಾವಣೆ ಹಿನ್ನೆಲೆಯಲ್ಲಿ ಮತದಾನ ಪ್ರಕ್ರಿಯೆಯನ್ನು ಶಾಂತಿಯುತ ವಾಗಿ ನಡೆಯಲು ಅನುಗುಣವಾಗುವಂತೆ ಡಿ.26ರ ರಾತ್ರಿ 9ಗಂಟೆ ಯಿಂದ ಮತದಾನ ಪ್ರಕ್ರಿಯೆ ಮುಕ್ತಾಯವಾಗುವವರೆಗೆ ಮತದಾನ ನಡೆಯಲಿ ರುವ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆಯನ್ನು ವಿಧಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News