ದ.ಕ.ಜಿಲ್ಲೆ: 11 ಮಂದಿಗೆ ಕೋವಿಡ್ ಪಾಸಿಟಿವ್
Update: 2021-12-30 15:34 GMT
ಮಂಗಳೂರು, ಡಿ.30: ದ.ಕ.ಜಿಲ್ಲೆಯಲ್ಲಿ ಗುರುವಾರ 11 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. 8 ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಪಾಸಿಟಿವ್ ದರ ಶೇ.0.16 ದಾಖಲಾಗಿದೆ.
ಜಿಲ್ಲೆಯಲ್ಲಿ ಈವರೆಗೆ 1,16,352 ಪಾಸಿಟಿವ್ ಪ್ರಕರಣ ದಾಖಲಾಗಿದೆ. ಸೋಂಕಿತರ ಪೈಕಿ ಒಟ್ಟು 1,14,506 ಮಂದಿ ಗುಣಮುಖ ರಾಗಿ ಬಿಡುಗಡೆಗೊಂಡಿದ್ದಾರೆ. 1,700 ಮಂದಿ ಕೋವಿಡ್ಗೆ ಬಲಿಯಾಗಿದ್ದಾರೆ. ಸದ್ಯ 146 ಸಕ್ರಿಯ ಪ್ರಕರಣವಿದೆ.
ಕೋವಿಡ್ ನಿಯಮ ಉಲ್ಲಂಘಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ 91,934 ಪ್ರಕರಣ ದಾಖಲಿಸಿ, 1,11,19,630 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಪ್ರಕಟನೆ ತಿಳಿಸಿದೆ.