ಗ್ರಾಪಂ ಚುನಾವಣೆ: ಸಂತೆ, ಜಾತ್ರೆ ನಿಷೇಧ
Update: 2023-06-06 07:33 GMT
ಉಡುಪಿ, ಅ.21: ಗ್ರಾಮ ಪಂಚಾಯತ್‌ಚುನಾವಣೆಗೆ ಸಂಬಂಧಿಸಿದಂತೆ ವಿವಿಧ ಕಾರಣಗಳಿಂದ ತೆರವಾಗಿರುವ ಜಿಲ್ಲೆಯ ಬೈಂದೂರು ತಾಲೂಕು ಕಾಲ್ತೋಡು ಗ್ರಾಮ ಪಂಚಾಯತ್, ಬ್ರಹ್ಮಾವರ ತಾಲೂಕು ಯಡ್ತಾಡಿ ಹಾಗೂ ಉಪ್ಪೂರು ಗ್ರಾಪಂ ಮತ್ತು ಕಾಪು ತಾಲೂಕು ಮುದರಂಗಡಿ ಗ್ರಾಪಂನ ಸದಸ್ಯ ಸ್ಥಾನಗಳಿಗೆ ಅ.28ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಮತ್ತು ಸಾರ್ವಜನಿಕರು ಮತ ಹಾಕಲು ಅನುಕೂಲವಾಗುವಂತೆ ಮತದಾನದ ದಿನದಂದು ಈ ಮೇಲ್ಕಂಡ ವ್ಯಾಪ್ತಿಯ ಪ್ರದೇಶಗಳಲ್ಲಿ ನಡೆಯುವ ಸಂತೆ, ಜಾತ್ರೆಗಳನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕೂರ್ಮಾರಾವ್ ಎಂ ಆದೇಶ ಹೊರಡಿಸಿದ್ದಾರೆ.