ಮಡಿಕೇರಿ: ಕೆರೆಗೆ ಬಿದ್ದು ಯುವತಿ ಮೃತ್ಯು
Update: 2023-06-05 06:45 GMT
ಮಡಿಕೇರಿ: ಯುವತಿಯೊಬ್ಬಳು ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟಿರುವ ಘಟನೆ ಕೊಣಂಜಗೇರಿ ಪಾರಾಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಿರುಂದಾಡು ಗ್ರಾಮದಲ್ಲಿ ನಡೆದಿದೆ.
ಪಾರಾಣೆ ಗ್ರಾ.ಪಂ ಸದಸ್ಯೆ ದಾಕ್ಷಾಯಿಣಿ ಹಾಗೂ ಕುಶಾಲಪ್ಪ ಅವರ ಪುತ್ರಿ ಚಸ್ಮಿಕಾ (20) ಮೃತಪಟ್ಟಿರುವ ಯುವತಿ ಎಂದು ತಿಳಿದು ಬಂದಿದೆ.
ಮೂರ್ನಾಡು ಸರ್ಕಾರಿ ಅನುದಾನಿತ ಕಾಲೇಜಿನಲ್ಲಿ ಬಿ.ಕಾಂ. ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಚಸ್ಮಿಕಾ ಇಂದು ಬೆಳಗ್ಗೆ ಗದ್ದೆಯಲ್ಲಿ ದನ ಕಟ್ಟಲು ಕೆರೆಯ ಪಕ್ಕದ ದಾರಿಯಲ್ಲಿ ಹೋಗುವಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದಿದ್ದಾಳೆ ಎಂದು ತಿಳಿದು ಬಂದಿದೆ.
ಮೃತದೇಹ ಹೊರತೆಗೆದ ಯುವಕರು: ಘಟನೆ ಬಗ್ಗೆ ತಿಳಿದು ಸ್ಥಳಕ್ಕೆ ಧಾವಿಸಿದ ನಾಪೋಕ್ಲುವಿನ ಸ್ಥಳೀಯ ಯುವಕರಾದ ಅಬ್ದುಲ್ ರಝಾಕ್, ಅಬ್ದುಲ್ ಮಜೀದ್ ಹಾಗೂ ಶಮೀರ್ ಯುವತಿಯ ಮೃತದೇಹವನ್ನು ಕೆರೆಯಿಂದ ಹೊರತೆಗೆಯಲು ಸಹಕರಿಸಿದ್ದಾರೆ.
ಸ್ಥಳಕ್ಕೆ ನಾಪೋಕ್ಲು ಠಾಣಾಧಿಕಾರಿ ಸದಾಶಿವ ಹಾಗೂ ಸಿಬ್ಬಂದಿ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.