ಕೊಣಾಜೆ: ಪಿ.ಎ. ತಾಂತ್ರಿಕ ಮಹಾ ವಿದ್ಯಾಲಯದ ವತಿಯಿಂದ ರಾಷ್ಟ್ರೀಯ ಇಂಧನ ಸಪ್ತಾಹ ಆಚರಣೆ

Update: 2022-01-02 16:31 GMT

ಕೊಣಾಜೆ: ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃಧ್ಧಿ ನಿಯಮಿತ ಹಾಗೂ ಎನ್.ಎಸ್.ಎಸ್ ಘಟಕ ಪಿ.ಎ.ತಾಂತ್ರಿಕ ಮಹಾವಿದ್ಯಾಲಯ ಸಂಯುಕ್ತ ಆಶ್ರಯದಲ್ಲಿ ಶನಿವಾರದಂದು 'ರಾಷ್ಟ್ರೀಯ ಇಂಧನ ಸಪ್ತಾಹ' ದಿನಾಚರಣೆ ನಡೆಯಿತು.

ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಲ್ಲಿ ಇಂಧನ ಉಳಿತಾಯ ಮತ್ತು ನವೀಕರಿಸಬಹುದಾದ ಇಂಧನ ಬಗ್ಗೆ ಅರಿವು ಮೂಡಿಸಲು ಹಮ್ಮಿಕೊಂಡ ಜಾಗೃತಿ ಜಾಥವನ್ನು ಪದ್ಮಶ್ರೀ ಹರೇಕಳ ಹಾಜಬ್ಬರವರು ಉದ್ಘಾಟಿಸಿ ಮಾತನಾಡಿದರು.

ಕಾರ್ಯಕ್ರಮ ಸಂಯೋಜಕರಾದ ಪ್ರೊ.ಇಸ್ಮಾಯಿಲ್ ಶಾಫಿ ಪದ್ಮಶ್ರೀ ಹರೇಕಳ ಹಾಜಬ್ಬರವರನ್ನು ಪರಿಚಯಿಸಿದರು. ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಡಾ.ರಮೀಝ್ ಎಮ್.ಕೆ., ಡಾ. ಸಯ್ಯದ್ ಅಮೀನ್ ಅಹಮ್ಮದ್, ಕಾಲೇಜಿನ ಎನ್. ಎಸ್.ಎಸ್ ಘಟಕದ ಅಧಿಕಾರಿ ಪ್ರೋ. ಇಸ್ಮಾಯಿಲ್, ದೈಹಿಕ ಶಿಕ್ಷಣ ನಿರ್ದೇಶಕರಾದ ಇಕ್ಬಾಲ್, ಪ್ರೊ.ಮಜೀದ್ ಹಾಗೂ ವಿದ್ಯಾರ್ಥಿಗಳು, ಸಾರ್ವಜನಿಕರು, ಕಾಲೇಜಿನ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು. 

ಕಾಲೇಜಿನ ವಿದ್ಯಾರ್ಥಿಗಳಿಂದ ಇಂಧನ ಉಳಿತಾಯ ಹಾಗೂ ಪ್ರಾತ್ಯಕ್ಷಿಕೆಗಳನ್ನು ಪ್ರದರ್ಶಿಸಲಾಯಿತು. ಪ್ರೊ. ಜಾನ್ ವಾಲ್ಡರ್ ರವರು ಇಂಧನ ಉಳಿತಾಯ ಹಾಗೂ ಇದರಿಂದ ಆಗುವ ಉಪಯೋಗಗಳ ಬಗ್ಗೆ ತಿಳಿಸಿಕೊಟ್ಟರು. ಪ್ರೊ.ವಿಠಲ್ ಭಟ್ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News