ಬಸ್ ಢಿಕ್ಕಿ: ಪಾದಚಾರಿ ಮೃತ್ಯು
Update: 2022-01-03 16:51 GMT
ಕುಂದಾಪುರ, ಜ.3: ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಿಂತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಜ.2ರಂದು ರಾತ್ರಿ 10ಗಂಟೆ ಸುಮಾರಿಗೆ ಹೆಮ್ಮಾಡಿ ಗ್ರಾಮದ ಹೆಮ್ಮಾಡಿ ಜಂಕ್ಷನ ಬಳಿ ನಡೆದಿದೆ.
ಕೊಲ್ಲೂರಿನಿಂದ ಕುಂದಾಪುರ ಕಡೆಗೆ ಹೋಗುತ್ತಿದ್ದ ಬಸ್, ರಸ್ತೆ ಬದಿ ನಿಂತಿದ್ದ ಸುರೇಂದ್ರ ಎಂಬವರಿಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ತೀವ್ರವಾಗಿ ಗಾಯಗೊಂಡ ಅವರು ಮೃತಪಟ್ಟರೆಂದು ತಿಳಿದುಬಂದಿದೆ. ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.