ಕಾರ್ಯಕರ್ತರಲ್ಲಿ ಬದ್ದತೆಯಿದ್ದಾಗ ಮಾತ್ರ ಪಕ್ಷ ಬೆಳೆಯಲು ಸಾಧ್ಯ : ಅಶೋಕ್ ಕುಮಾರ್

Update: 2022-01-04 15:40 GMT

ಉಡುಪಿ, ಜ.4: ಪಕ್ಷದ ಕಾರ್ಯಕರ್ತರಲ್ಲಿ ಪಕ್ಷದ ಕುರಿತಂತೆ ಬದ್ಧತೆ ಇದ್ದಲ್ಲಿ ಮಾತ್ರ ಆ ಪಕ್ಷ ಬೆಳೆಯಲು ಸಾಧ್ಯವಾಗುತ್ತದೆ. ಹೀಗಾಗಿ ಬದ್ದತೆ ಉಳ್ಳ ವ್ಯಕ್ತಿಗಳನ್ನು ಗುರುತಿಸುವುದು ಪಕ್ಷದ ಕರ್ತವ್ಯವಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್  ಕೊಡವೂರು ಹೇಳಿದ್ದಾರೆ.

ಬ್ರಹ್ಮಗಿರಿಯ ನಾಯರ್‌ ಕೆರೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಜರಗಿದ ಜಿಲ್ಲಾ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು.

ಜಿಲ್ಲೆಯಲ್ಲಿ ಪಕ್ಷದ ಕಾರ್ಯಕರ್ತರು ಸಂಘಟಿತರಾಗಿ ತೊಡಗಿಸಿಕೊಳ್ಳುವು ದರಿಂದ ಪಕ್ಷ ಬೆಳೆಯುತ್ತದೆ. ಈ ಹಿನ್ನೆಲೆಯಲ್ಲಿ ಇತ್ತೀಚಿಗೆ ನಡೆದ ಗ್ರಾಪಂ ಚುನಾವಣೆಗಳಲ್ಲಿ ಹೆಚ್ಚಿನ ಅಭ್ಯರ್ಥಿಗಳು ಜಯಗಳಿಸಲು ಸಾಧ್ಯವಾಯಿತು. ಕಾಪು ಪುರಸಭಾ ಚುನಾವಣೆಯಲ್ಲಿ ಮತ ವಿಭಜನೆಯಿಂದ ಪಕ್ಷಕ್ಕೆ ಹಿನ್ನಡೆ ಯಾದರೂ ಮುಂದಿನ ದಿನಗಳಲ್ಲಿ ಪಕ್ಷಕ್ಕೆ ಆಗುತ್ತಿರುವ ಹಾನಿಯನ್ನು ತಡೆಗಟ್ಟುವ ಬಗ್ಗೆ ಕಾರ್ಯಯೋಜನೆ ಹಮ್ಮಿಕೊಳ್ಳಬೇಕಾಗಿದೆ. ಪಕ್ಷದ ಮೇಲೆ ಪ್ರತಿಯೊ ಬ್ಬರಿಗೂ ಬದ್ಧತೆ ಇರಬೇಕು. ಆಗ ಮಾತ್ರ ಪಕ್ಷ ಬೆಳವಣಿಗೆ ಹೊಂದಲು ಸಾಧ್ಯ ಎಂದರು.

ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಮಾತನಾಡಿ, ರಾಜ್ಯದ ಹಿತಾಸಕ್ತಿ ಗಾಗಿ ಕಾಂಗ್ರೆಸ್‌ನಿಂದ ಮೇಕೆದಾಟು ಪಾದಯಾತ್ರೆ ನಡೆಯಲಿದೆ. ಇದೇ ಜ.9 ರಿಂದ 19ರವರೆಗೆ ನಡೆಯುವ ಈ ಪಾದಯಾತ್ರೆಯಲ್ಲಿ ಜಿಲ್ಲೆಯ ಕಾರ್ಯ ಕರ್ತರೂ ಪಾಲ್ಗೊಳ್ಳಬೇಕು ಹಾಗೂ ಕುಡಿಯುವ ನೀರಿನ ಹಕ್ಕಿಗೋಸ್ಕರ ನಡೆ ಯುತ್ತಿರುವ ಈ ಪಾದಯಾತ್ರೆಯನ್ನು ಯಶಸ್ವಿಗೊಳಿಸಬೇಕಾಗಿದೆ ಎಂದರು.

ಕೋಟದಲ್ಲಿ ಕೊರಗರ ಕಾಲೋನಿಯಲ್ಲಿ ನಡೆದ ಪೊಲೀಸ್ ದೌರ್ಜನ್ಯದ ಕುರಿತಂತೆ ಜಿಲ್ಲಾ ಕಾಂಗ್ರೆಸ್‌ನಿಂದ ಖಂಡನಾ ನಿರ್ಣಯ ಕೈಗೊಳ್ಳಲಾಯಿತು. ಘಟನೆಯಲ್ಲಿ ಸರಕಾರದ ವೈಫಲ್ಯವನ್ನು ಮರೆಮಾಚಲು ವಿವಿಧ ಕಟ್ಟುಕತೆಗಳನ್ನು ಕಟ್ಟಲಾಗುತ್ತಿದೆ. ಈ ಹಿನ್ನಲೆಯಲ್ಲಿ ಜಿಲ್ಲಾ ಕಾಂಗ್ರೆಸ್‌ನಿಂದ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಬೇಕು ಎಂದು ಸೊರಕೆ ಸಲಹೆ ನೀಡಿದರು.

ಅಕಾಲಿಕವಾಗಿ ನಿಧನ ಹೊಂದಿದ ಪಕ್ಷದ ಮುಖಂಡರಾದ ಪ್ರವೀಣ್ ಶೆಟ್ಟಿ ಕೊರಂಗ್ರಪಾಡಿ, ಜನಾರ್ದನ ಭಂಡಾರ್ಕಾರ್, ಶಂಭು ಪೂಜಾರಿ ಅವರಿಗೆ ಜಿಲ್ಲಾ ಕಾಂಗ್ರೆಸ್‌ನಿಂದ ನುಡಿನಮನ ಸಲ್ಲಿಸಲಾಯಿತು.

ಜಿಲ್ಲಾ ವಕ್ತಾರ ಬಿಪಿನ್‌ಚಂದ್ರಪಾಲ್ ನಕ್ರೆ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಕೆ.ಅಣ್ಣಯ್ಯ ಸೇರಿಗಾರ್ ಕಾರ್ಯಕ್ರಮ ನಿರ್ವಹಿಸಿ, ವಕ್ತಾರ ಭಾಸ್ಕರ್ ರಾವ್ ಕಿದಿಯೂರು ವಂದಿಸಿದರು.

ಸಭೆಯಲ್ಲಿ ಬ್ಲಾಕ್ ಅಧ್ಯಕ್ಷರಾದ ಮಂಜುನಾಥ ಪೂಜಾರಿ, ಸದಾಶಿವ ದೇವಾಡಿಗ, ನವೀನ್‌ಚಂದ್ರ ಸುವರ್ಣ, ಶಂಕರ್ ಕುಂದರ್, ಪ್ರದೀಪ್ ಕುಮಾರ್ ಶೆಟ್ಟಿ, ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ, ಮದನ್‌ಕುಮಾರ್, ದಿನಕರ ಹೇರೂರು, ರಮೇಶ್ ಕಾಂಚನ್, ಮುಂಚೂಣಿ ಘಟಕಗಳ ಅಧ್ಯಕ್ಷರಾದ ಕಿಶೋರ್ ಎರ್ಮಾಳ್, ಸೌರಭ್ ಬಲ್ಲಾಳ್, ಶಶಿಧರ ಶೆಟ್ಟಿ ಎಲ್ಲೂರು, ರೋಶನಿ ಒಲಿವರ್, ಇಸ್ಮಾಯಿಲ್ ಆತ್ರಾಡಿ, ರೋಶನ್ ಶೆಟ್ಟಿ, ಗಣೇಶ್ ಪೂಜಾರಿ ಕೆರ್ವಾಶೆ, ಕೆಪಿಸಿಸಿ ಸಂಯೋಜಕರಾದ ವೆರೋನಿಕಾ ಕರ್ನೇಲಿಯೋ, ಹರೀಶ್ ಕಿಣಿ ಅಲೆವೂರು, ಹಬೀಬ್ ಆಲಿ ಖಾದರ್, ಅಬ್ದುಲ್ ಅಜೀಜ್, ಮುರಳಿ ಶೆಟ್ಟಿ, ಡಾ. ಸುನೀತಾ ಶೆಟ್ಟಿ, ಜಿಲ್ಲಾ ಕಾಂಗ್ರೆಸ್ ಮುಖಂಡರಾದ ಬಿ. ಹಿರಿಯಣ್ಣ, ನೀರೆ ಕೃಷ್ಣ ಶೆಟ್ಟಿ, ಸುಧಾಕರ ಕೋಟ್ಯಾನ್, ರಮೇಶ್ ಶೆಟ್ಟಿ ಹಾವಂಜೆ, ಪ್ರಖ್ಯಾತ್ ಶೆಟ್ಟಿ, ಶಬ್ಬೀರ್ ಅಹ್ಮದ್, ದೇವಾನಂದ ಶೆಟ್ಟಿ, ವಿನಯ ಬಲ್ಲಾಳ್, ಬಿ. ಕುಶಲ್ ಶೆಟ್ಟಿ, ಉದ್ಯಾವರ ನಾಗೇಶ್ ಕುಮಾರ್, ಹೆಚ್. ನಿತ್ಯಾನಂದ ಶೆಟ್ಟಿ, ಯತೀಶ್ ಕರ್ಕೇರ, ರಾಘವ ದೇವಾಡಿಗ, ಪ್ರಶಾಂತ್ ಜತ್ತನ್ನ, ಬಾಲಕೃಷ್ಣ ಪೂಜಾರಿ, ಲೂಯಿಸ್ ಲೋಬೊ, ಜಯ ಶೆಟ್ಟಿ ಬನ್ನಂಜೆ, ಸೋಮನಾಥ ನಾಯ್ಕಿ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News