ಜ.6-7: ಹಲವೆಡೆ ವಿದ್ಯುತ್ ವ್ಯತ್ಯಯ

Update: 2022-01-05 16:47 GMT

ಮಂಗಳೂರು : ನಗರದ ನೆಹರೂ ಮೈದಾನ ಉಪಕೇಂದ್ರದಿಂದ ಹೊರಡುವ ಮಾರ್ಕೆಟ್ ಫೀಡರ್ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿಟಎಸ್ ದುರಸ್ತಿ ಕಾಮಗಾರಿ ನಡೆಯಲಿರುವುದರಿಂದ ಜ.6ರ ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಲೇಡಿಗೋಷನ್ ಆಸ್ಪತ್ರೆ, ಸೆಂಟ್ರಲ್ ಮಾರ್ಕೆಟ್, ಶಾಂತದುರ್ಗಾ, ಪಿ.ಎಂ.ರಾವ್ ರೋಡ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ.

ನಂದಿಕೂರು-ಮುಲ್ಕಿ ಉಪಕೇಂದ್ರದಿಂದ ಹೊರಡುವ ಮುಲ್ಕಿ ವಿದ್ಯುತ್ ಮಾರ್ಗದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ನಡೆಯಲಿ ರುವುದರಿಂದ ಜ.6ರ ಬೆಳಗ್ಗೆ 10ರಿಂದ ಅಪರಾಹ್ನ 3 ಗಂಟೆಯವರೆಗೆ ಮುಲ್ಕಿ, ಚಿತ್ರಾಪು, ಕೊಕ್ಕರೆಕಲ್‌ಲ್, ಬಪ್ಪನಾಡು, ಕೊಳಚಿಕಂಬ್ಳ, ಪಂಚಮಹಲ್ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ.

ನಗರದ ಮಣ್ಣಗುಡ್ಡ ಉಪಕೇಂದ್ರದಿಂದ ಹೊರಡುವ ಮಠದಕಣಿ ಫೀಡರ್‌ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿಒಎಸ್ ದುರಸ್ತಿ ಕಾಮಗಾರಿ ನಡೆಯಲಿರುವುದರಿಂದ ಜ.7ರಂದು ಬೆಳಗ್ಗೆ 10ರಿಂದ ಸಂಜೆ 5:30 ಗಂಟೆಯವರೆಗೆ ಮಠದಕಣಿ, ಬರ್ಕೆ ಪೊಲೀಸ್ ಠಾಣೆಯ ರಸ್ತೆ, ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ದ್ಯುತ್ ನಿಲುಗಡೆಯಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News