ಜ.10ರಿಂದ ಉಡುಪಿ ಡಾ.ಟಿಎಂಎ ಪೈ ಆಸ್ಪತ್ರೆಯಲ್ಲಿ ಕ್ಯಾನ್ಸರ್ ಶಸ್ತ್ರಚಿಕಿತ್ಸಾ ಹೊರರೋಗಿ ಸೇವೆ ಆರಂಭ

Update: 2022-01-06 13:42 GMT

ಉಡುಪಿ, ಜ.6: ಉಡುಪಿಯ ಡಾ.ಟಿ.ಎಂ.ಎ ಪೈ ಆಸ್ಪತ್ರೆಯಲ್ಲಿ ಇದೇ ಜ.10 ಸೋಮವಾರದಿಂದ ಕ್ಯಾನ್ಸರ್ ಶಸ್ತ್ರಚಿಕಿತ್ಸಾ ಹೊರರೋಗಿ ಸೇವೆ ಪ್ರಾರಂಭ ಗೊಳ್ಳಲಿದೆ ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಶಶಿಕಿರಣ್ ಉಮಾಕಾಂತ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಹೊಸ ಸೇವೆಯು ಪ್ರತಿ ಸೋಮವಾರ ಅಪರಾಹ್ನ 2 ರಿಂದ ಸಂಜೆ 5 ರವರೆಗೆ ಲಭ್ಯವಿರುತ್ತದೆ. ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ಕ್ಯಾನ್ಸರ್ ಶಸ್ತ್ರಚಿಕಿತ್ಸಾ ವಿಭಾಗದ ಮುಖ್ಯಸ್ಥರಾದ ಡಾ. ನವೀನ ಕುಮಾರ್ ಎ.ಎನ್. ನೇತೃತ್ವದ ತಂಡ ಎಲ್ಲಾ ರೀತಿಯ ಕ್ಯಾನ್ಸರ್ ಸಮಾಲೋಚನೆಗೆ ಲಭ್ಯವಿರುತ್ತದೆ.

ಕ್ಯಾನ್ಸರ್ ಕಾಯಿಲೆಯನ್ನು ಆರಂಭದಲ್ಲಿಯೇ ಪತ್ತೆಹಚ್ಚಿ ಸೂಕ್ತ ಚಿಕಿತ್ಸೆ ನೀಡುವುದರಿಂದ ಅದನ್ನು ಸಂಪೂರ್ಣ ಗುಣಪಡಿಸುವ ಸಾಧ್ಯತೆ ಹೆಚ್ಚಿರುತ್ತದೆ. ಈಗ ಈ ಸೇವೆ ಉಡುಪಿಯಲ್ಲೇ ಲಭ್ಯವಿರುವುದರಿಂದ ಉಡುಪಿಯ ನಾಗರಿಕರಿಗೆ ಕ್ಯಾನ್ಸರ್ ಚಿಕಿತ್ಸಾ ಸೌಲಭ್ಯ ದೊರೆತಂತಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ಹಾಗೂ ಪೂರ್ವ ನಿಗದಿಗಾಗಿ ದೂರವಾಣಿ ಸಂಖ್ಯೆ: 7259032864 ಸಂಪರ್ಕಿಸುವಂತೆ ಡಾ. ಶಶಿಕಿರಣ್ ಉಮಾಕಾಂತ್ ತಿಳಿಸಿದ್ದಾರೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News