ಉಡುಪಿ ಜಿಲ್ಲೆಯಲ್ಲಿ 5739 ಮಂದಿಗೆ ಲಸಿಕೆ ನೀಡಿಕೆ

Update: 2022-01-06 13:46 GMT

ಉಡುಪಿ, ಜ.6: ಉಡುಪಿ ಜಿಲ್ಲೆಯಲ್ಲಿ ಇಂದು ಒಟ್ಟು 5739 ಮಂದಿಗೆ ಕೋವಿಡ್ ಲಸಿಕೆಯನ್ನು ನೀಡಲಾಗಿದೆ. ಇವರಲ್ಲಿ 3586 ಮಂದಿ 15ರಿಂದ 18 ವರ್ಷದೊಳಗಿನ ಮಕ್ಕಳಿಗೆ ಮೊದಲ ಡೋಸ್ ಕೋವಿಡ್ ಲಸಿಕೆ ಕೋವ್ಯಾಕ್ಸಿನ್ ನೀಡಲಾಗಿದೆ. ಒಟ್ಟಾರೆಯಾಗಿ ದಿನದಲ್ಲಿ 4704 ಮಂದಿ ಮೊದಲ ಡೋಸ್ ಹಾಗೂ 1035 ಮಂದಿ ಎರಡನೇ ಡೋಸ್ ಲಸಿಕೆಯನ್ನು ಸ್ವೀಕರಿಸಿದ್ದಾರೆ ಎಂದು ಡಿಎಚ್‌ಓ ಡಾ.ಉಡುಪ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಒಟ್ಟಾರೆ 53,55 ಮಂದಿ 15ರಿಂದ 18ವರ್ಷದೊಳಗಿನ ಮಕ್ಕಳಿಗೆ ಲಸಿಕೆಯನ್ನು ನೀಡುವ ಗುರಿಯನ್ನು ಇದ್ದು, ಇಂದು ಸಂಜೆಯವರೆಗೆ 28,394 ಮಕ್ಕಳಿಗೆ ಲಸಿಕೆಯನ್ನು ನೀಡಲಾಗಿದೆ. ಈ ಮೂಲಕ ಒಟ್ಟಾರೆಯಾಗಿ ಶೇ.54 ವಿದ್ಯಾರ್ಥಿಗಳು ಮೊದಲ ಡೋಸ್ ಲಸಿಕೆ ಪಡೆದಂತಾಗಿದೆ ಎಂದು ಆರೋಗ್ಯ ಇಲಾಖೆಯ ಮೂಲಗಳು ತಿಳಿಸಿವೆ.

ಇಂದು ಲಸಿಕೆ ಪಡೆದವರಲ್ಲಿ 18 ವರ್ಷದಿಂದ 44 ವರ್ಷದೊಳಗಿನ 1052 ಮಂದಿ ಮೊದಲ ಡೋಸ್ ಹಾಗೂ 745 ಮಂದಿ ಎರಡನೇ ಡೋಸ್ ಲಸಿಕೆಯನ್ನು ಸ್ವೀಕರಿಸಿದರೆ, 45 ವರ್ಷ ಮೇಲಿನ 66 ಮಂದಿ ಮೊದಲ ಡೋಸ್ ಹಾಗೂ 288 ಮಂದಿ ಎರಡನೇ ಡೋಸ್ ಪಡೆದಿದ್ದಾರೆ. ಒಟ್ಟು ಇಬ್ಬರು ಆರೋಗ್ಯ ಹಾಗೂ ಮುಂಚೂಣಿ ಕಾರ್ಯಕರ್ತರೂ ಎರಡನೇ ಡೋಸ್ ಲಸಿಕೆ ಸ್ವೀಕರಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News