ದ.ಕ.ಜಿಲ್ಲೆ : 582 ಮಂದಿಗೆ ಕೋವಿಡ್ ಪಾಸಿಟಿವ್

Update: 2022-01-11 13:28 GMT
ಸಾಂದರ್ಭಿಕ ಚಿತ್ರ

ಮಂಗಳೂರು, ಜ.11: ದ.ಕ.ಜಿಲ್ಲೆಯಲ್ಲಿ ಮಂಗಳವಾರ 583 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. 94 ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಪಾಸಿಟಿವ್ ದರ ಶೇ.5.73 ದಾಖಲಾಗಿದೆ.

ಜಿಲ್ಲೆಯಲ್ಲಿ ಈವರೆಗೆ 1,18,400 ಪಾಸಿಟಿವ್ ಪ್ರಕರಣ ದಾಖಲಾಗಿದೆ. ಸೋಂಕಿತರ ಪೈಕಿ ಒಟ್ಟು 1,14,823 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. 1,705 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ. ಸದ್ಯ 1,872 ಸಕ್ರಿಯ ಪ್ರಕರಣವಿದೆ.

ಕೋವಿಡ್ ನಿಯಮ ಉಲ್ಲಂಘಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ 93,056 ಪ್ರಕರಣ ದಾಖಲಿಸಿ, 1,12,56,930 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News