ಮಣಿಪಾಲ: ಜ.12ರಂದು ಯುವ ಸಪ್ತಾಹ ಉದ್ಘಾಟನೆ

Update: 2022-01-11 15:21 GMT

ಉಡುಪಿ, ಜ.11: ಜಿಲ್ಲಾಡಳಿತ, ಜಿಪಂ, ಕಾಲೇಜು ಶಿಕ್ಷಣ ಇಲಾಖೆ, ನೆಹರೂ ಯುವ ಕೇಂದ್ರ, ಸಾರ್ವಜನಿಕ ಶಿಕ್ಷಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಾರಿಗೆ ಇಲಾಖೆ, ವಾರ್ತಾ ಮತ್ತು ಪ್ರಸಾರ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸೇರಿದಂತೆ ವಿವಿಧ ಸಂಸ್ಥೆಗಳ ಸಹಯೋಗದೊಂದಿಗೆ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ ಹಾಗೂ ಆಜಾದ್ ಕಾ ಅಮೃತ ಮಹೋತ್ಸವದ ಅಂಗವಾಗಿ ಆಯೋಜಿಸಿರುವ ಯುವ ಸಪ್ತಾಹದ ಉದ್ಘಾಟನಾ ಸಮಾರಂಭ ಜ.12ರ ಬೆಳಗ್ಗೆ 9:30ಕ್ಕೆ ಮಣಿಪಾಲದಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ರಾಜ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಸಚಿವ ವಿ. ಸುನೀಲ್ ಕುಮಾರ್ ಉದ್ಘಾಟಿಸಲಿದ್ದು, ಉಡುಪಿ ಶಾಸಕ ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಸಂಘಟಕರ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News