ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೊಳಿಸಲು ಅವಕಾಶ

Update: 2022-01-11 15:28 GMT

ಮಂಗಳೂರು, ಜ.11:ದ.ಕ.ಜಿಲ್ಲೆಯ ಮೂಲದವರಾಗಿದ್ದು ವಿದ್ಯಾಭ್ಯಾಸ, ಉದ್ಯೋಗ ಹಾಗೂ ಇನ್ನಿತರ ಕಾರಣಗಳಿಂದ ವಿದೇಶದಲ್ಲಿ ನೆಲೆಸಿರುವವರನ್ನು ಮತದಾರರ ಪಟ್ಟಿಗೆ ಸೇರ್ಪಡಿಸಲು ಅವಕಾಶ ಕಲ್ಪಿಸಲಾಗಿದೆ.

ಅನಿವಾಸಿ ಭಾರತೀಯರು (ಎನ್‌ಆರ್‌ಐ ವೋಟರ್ಸ್‌) ಮತದಾರರ ಪಟ್ಟಿಗೆ ತಮ್ಮ ಹೆಸರನ್ನು ಸೇರ್ಪಡೆ ಮಾಡಲು ಪಾಸ್‌ಪೋರ್ಟ್‌ನ ಪ್ರತಿ, ವೀಸಾದ ಪ್ರತಿ ಹಾಗೂ ಒಂದು ಭಾವಚಿತ್ರದೊಂದಿಗೆ ಫಾರ್ಮ್-6ಎ ಯನ್ನು ವೋಟರ್ ಹೆಲ್ಪ್‌ಲೈನ್ ಆ್ಯಪ್ ಅಥವಾ ವೆಬ್‌ಸೈಟ್ www.nvsp.in ಮೂಲಕ ನೋಂದಣಿ ಮಾಡಬಹುದಾಗಿದೆ.

ಎನ್‌ಆರ್‌ಐ ವೋಟರ್ಸ್‌ ಮತದಾರರ ಪಟ್ಟಿಗೆ ಸೇರ್ಪಡೆ ಬಯಸಿ ನಮೂನೆ-6ಎ ಯಲ್ಲಿ ಅರ್ಜಿ ಸಲ್ಲಿಸುವಾಗ ಆ ಸದಸ್ಯರ ಹೆಸರು ಸಾಮಾನ್ಯ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಿರಬಾರದು. ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ತಿದ್ದುಪಡಿ, ಒಂದು ವಿಧಾನ ಸಭಾ ಕ್ಷೇತ್ರದಿಂದ ಮತ್ತೊಂದು ಕ್ಷೇತ್ರಕ್ಕೆ ಬದಲಾವಣೆ ಸಹಿತ ಎಲ್ಲ ಸಮಸ್ಯೆಗಳಿಗೆ ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಉಚಿತ ಸಹಾಯವಾಣಿ ಸಂಖ್ಯೆ 1950 ಮೂಲಕ ಕರೆ ಮಾಡಿ ಸಮಸ್ಯೆ ಬಗೆಹರಿಸಿಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News