ಸಮುದಾಯ ಆರೋಗ್ಯ ಅಧಿಕಾರಿ ಹುದ್ದೆಯಲ್ಲಿ ತುಳುವರಿಗೆ ಪ್ರಾಶಸ್ತ್ಯ: ತುರವೇ ಮನವಿ

Update: 2022-01-11 16:11 GMT

ಮಂಗಳೂರು, ಜ.11: ಆರೋಗ್ಯ ಇಲಾಖೆಯ ಅಧಿಕಾರಿ ಹುದ್ದೆಗೆ ತುಳು ಭಾಷಿಗರಿಗೆ ಸೂಕ್ತ ಪ್ರಾಶಸ್ತ್ಯ ನೀಡು ವಂತೆ ಆಗ್ರಹಿಸಿ, ತುಳುನಾಡ ರಕ್ಷಣಾ ವೇದಿಕೆಯ ನಿಯೋಗವು ದ.ಕ. ಜಿಲ್ಲಾ ಆರೋಗ್ಯ ಅಧಿಕಾರಿಗೆ ಮಂಗಳವಾರ ಮನವಿ ಪತ್ರ ಸಲ್ಲಿಸಿದೆ.

ದ.ಕ. ಜಿಲ್ಲೆಯು ವೈದ್ಯಕೀಯ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ವಿಶ್ವದಲ್ಲಿಯೇ ಅಗ್ರ ಸ್ಥಾನದಲ್ಲಿದೆ. ಇಲ್ಲಿನ ನುರಿತ ವೈದ್ಯರು ಹಾಗೂ ವಿಶ್ವ ದರ್ಜೆಯ ಆಸ್ಪತ್ರೆಗಳು ನೀಡುತ್ತಿರುವ ಸೇವೆ ಶ್ಲಾಘನೀಯವಾಗಿದೆ. ದ.ಕ. ಜಿಲ್ಲೆಗೆ ಸಮುದಾಯ ಆರೋಗ್ಯ ಅಧಿಕಾರಿ ಹುದ್ದೆಯು ಹೊಸದು. ಗ್ರಾಮೀಣ ಪ್ರದೇಶದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಇವರು ನೀಡುವ ಸೇವೆಯಿಂದ ಸಾರ್ವಜನಿಕರಿಗೆ ತುಂಬಾ ಅನುಕೂಲವಾಗಿದೆ. ಈ ಹುದ್ದೆಗೆ ಇದೀಗ ಹೊರಜಿಲ್ಲೆ ಅಭ್ಯರ್ಥಿಗಳು ಕೂಡ ಸ್ಪರ್ಧೆಯಲ್ಲಿದ್ದಾರೆ. ಹಾಗಾಗಿ ದ.ಕ. ಜಿಲ್ಲೆಯಲ್ಲಿ ಸಮುದಾಯ ಆರೋಗ್ಯ ಅಧಿಕಾರಿ ಹುದ್ದೆಗೆ ತುಳು ಭಾಷಿಗರಿಗೆ ಪ್ರಾಶಸ್ತ್ಯ ನೀಡಬೇಕು ಎಂದು ಒತ್ತಾಯಿಸಿದೆ.

ತುಳುನಾಡ ರಕ್ಷಣಾ ವೇದಿಕೆ ಮುಖಂಡರಾದ ರಮೇಶ್ ಶೆಟ್ಟಿ ಮಜಲೋಡಿ, ಆನಂದ್ ಅಮೀನ್ ಅಡ್ಯಾರ್, ಹರೀಶ್ ಶೆಟ್ಟಿ ಶಕ್ತಿನಗರ, ಮುನೀರ್ ಮುಕ್ಕಚೇರಿ, ಅಬ್ದುಲ್ ಅಝೀಝ್ ಉಳ್ಳಾಲ ಹಾಗು ಇತರರು ನಿಯೋಗದಲ್ಲಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News