​ವಿದ್ಯಾರ್ಥಿ ವೇತನ: ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಣೆ

Update: 2022-01-18 16:08 GMT

ಮಂಗಳೂರು, ಜ.18: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ (ವೃತ್ತಿಪರ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಮಾತ್ರ) ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಂದ ಪ್ರಸಕ್ತ ಸಾಲಿನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆಯ ಅವಧಿಯನ್ನು ಜ.27ರವರಗೆ ವಿಸ್ತರಿಸಲಾಗಿದೆ.

ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳ ಹೊಸಪ್ರವೇಶಕ್ಕೆ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ, ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವೃತ್ತಿಪರ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳು 2021-22ನೇ ಸಾಲಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ಜ.27ರ ವರೆಗೆ ಅವಕಾಶ ನೀಡಲಾಗಿದೆ.

*ಪೋಷಕರ ಆದಾಯ ಮಿತಿ: ಪ್ರವರ್ಗ-1, ಪರಿಶಿಷ್ಟ ಜಾತಿ, ಪಂಗಡಕ್ಕೆ 2.50 ಲಕ್ಷ ರೂ., ಪ್ರವರ್ಗ 2ಎ,2ಬಿ,3ಎ,3ಬಿ ಇತರೆ ಹಿಂದುಳಿದ ವರ್ಗಗಳಿಗೆ 1 ಲಕ್ಷ ರೂ. ಅಗಿದೆ.
ಮಾಹಿತಿಗೆwww.bcwdkarnataka.gov.in ಅಥವಾ ಸಹಾಯವಾಣಿ ಸಂಖ್ಯೆ: 8050370006ನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News