ಕಲಾರಂಗ ಕಚೇರಿಗೆ ಯಕ್ಷಗಾನ ಅಕಾಡಮಿ ಅಧ್ಯಕ್ಷರ ಭೇಟಿ

Update: 2022-01-23 15:21 GMT

ಉಡುಪಿ, ಜ.23: ಇತ್ತೀಚೆಗೆ ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷರಾಗಿ ನಿಯುಕ್ತಿಗೊಂಡ ಹಿರಿಯ ಯಕ್ಷಗಾನ ಕಲಾವಿದ, ಸಂಶೋಧಕ ಡಾ.ಜಿ.ಎಲ್. ಹೆಗಡೆ ಶನಿವಾರ ಯಕ್ಷಗಾನ ಕಲಾರಂಗಕ್ಕೆ ಭೇಟಿ ನೀಡಿ ಸಂಸ್ಥೆಯ ಕಾರ್ಯಚಟು ವಟಿಕೆಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.

ಸಂಸ್ಥೆಯ ಅಧ್ಯಕ್ಷ ಎಂ.ಗಂಗಾಧರ ರಾವ್ ಡಾ.ಜಿ.ಎಲ್.ಹೆಗಡೆಯವರನ್ನು ಗೌರವಿಸಿದರು. ಈ ಸಂದರ್ಭದಲ್ಲಿ ಯಕ್ಷಗಾನ ಅಕಾಡೆಮಿಯ ರಿಜಿಸ್ಟ್ರಾರ್ ಶಿವರುದ್ರಪ್ಪ, ಸಂಸ್ಥೆಯ ಕಾರ್ಯದರ್ಶಿ ಮುರಲಿ ಕಡೆಕಾರ್, ಜತೆ ಕಾರ್ಯದರ್ಶಿ ಪ್ರೊ.ನಾರಾಯಣ ಎಂ.ಹೆಗಡೆ, ಎಚ್.ಎನ್.ಶೃಂಗೇಶ್ವರ, ನಟರಾಜ ಉಪಾಧ್ಯ ಹಾಗೂ ಕಿಶೋರ್ ಸಿ.ಉದ್ಯಾವರ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News