ಉಡುಪಿ ಜಿಲ್ಲಾ ಕಾಂಗ್ರೆಸ್‌ನಿಂದ ಗಣರಾಜ್ಯೋತ್ಸವ
Update: 2022-01-26 15:47 GMT
ಉಡುಪಿ, ಜ.26: ಉಡುಪಿ ಜಿಲ್ಲಾ ಕಾಂಗ್ರೆಸ್ ಹಾಗೂ ಕಾಂಗ್ರೆಸ್ ಸೇವಾದಳದಿಂದ ದೇಶದ 73ನೇ ಗಣ ರಾಜ್ಯೋತ್ಸವವನ್ನು ಉಡುಪಿ ಸರ್ವಿಸ್ ನಿಲ್ದಾಣ ಬಳಿ ಇರುವ ಗಾಂಧಿ ಪ್ರತಿಮೆಯ ಮುಂಭಾಗದಲ್ಲಿ ಆಚರಿಸಲಾಯಿತು.
ಮಾಜಿ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ವಿನಯಕುಮಾರ್ ಸೊರಕೆ ಅವರು ಧ್ವಜಾರೋಹಣ ನೆರವೇರಿಸಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಪ್ರಜಾಪ್ರಭುತ್ವ ಮಹತ್ವವನ್ನು ವಿವರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಮುಖಂಡರಾದ ದಿನೇಶ್ ಪುತ್ರನ್, ಶಬ್ಬೀರ್ ಅಹ್ಮದ್, ಕೆ. ಅಣ್ಣಯ್ಯ ಸೇರಿಗಾರ್, ಬಾಲಕೃಷ್ಣ ಪೂಜಾರಿ, ಉದ್ಯಾವರ ನಾಗೇಶ್ ಕುಮಾರ್, ಜಿಲ್ಲಾ ಸೇವಾದಳದ ಅಧ್ಯಕ್ಷ ಕಿಶೋರ್ ಕುಮಾರ್ ಎರ್ಮಾಳ್, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಇಸ್ಮಾಯಿಲ್ ಆತ್ರಾಡಿ, ಜಿಲ್ಲಾ ಸೇವಾದಳದ ಮುಖಂಡರಾದ ಶರತ್ ನಾಯ್ಕಾ, ಉಮೇಶ್ ಪೂಜಾರಿ, ರಾಜೇಶ್ ನಾಯ್ಕಾ, ಲಕ್ಷ್ಮೀ ನಾಯ್ಕಾ, ಉಡುಪಿ ಬ್ಲಾಕ್ ಅಧ್ಯಕ್ಷ ರಮೇಶ್ ಕಾಂಚನ್, ಮೀನಾಕ್ಷಿ ಮಾಧವ ಬನ್ನಂಜೆ ಮೊದಲಾದವರು ಉಪಸ್ಥಿತರಿದ್ದರು.