​ನಿಟ್ಟೂರು ಪ್ರೌಢಶಾಲೆಯ 14 ವಿದ್ಯಾರ್ಥಿಗಳ ಮನೆಗೆ ಎಲ್‌ಪಿಜಿ ಕೊಡುಗೆ

Update: 2022-01-30 14:43 GMT

ಉಡುಪಿ, ಜ.30: ನಿಟ್ಟೂರು ಪ್ರೌಢಶಾಲೆ ಕಳೆದ ಏಳು ವರ್ಷಗಳಲ್ಲಿ ಶಾಲೆಯ 80 ವಿದ್ಯಾರ್ಥಿಗಳಿಗೆ ಉಚಿತ ಗ್ಯಾಸ್ ಸೌಲಭ್ಯ ಕಲ್ಪಿಸಿದ್ದು, ಜ.29ರಂದು ಜರಗಿದ ಸಮಾರಂಭದಲ್ಲಿ 14 ವಿದ್ಯಾರ್ಥಿಗಳಿಗೆ ಉಚಿತವಾಗಿ ಎಲ್‌ಪಿಜಿ ಗ್ಯಾಸ್ ವಿತರಿಸಲಾಯಿತು.

ಶಾಲೆಯ ಹಳೆ ವಿದ್ಯಾರ್ಥಿ ಅನಂತ ಭಟ್ ಮಡಾಮಕ್ಕಿ ಗ್ಯಾಸ್ ವಿತರಿಸಿ ಶುಭ ಹಾರೈಸಿದರು. ಉಡುಪಿ ಗಾಂಧಿ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ.ಹರಿಶ್ಚಂದ್ರ, ನಿವೃತ್ತ ಮುಖ್ಯೋಪಾಧ್ಯಾಯ ಎಸ್.ವಿ.ಭಟ್ ಮಾತನಾಡಿ ದರು. ಶಾಲಾ ಆಡಳಿತ ಮಂಡಳಿಯ ಕಾರ್ಯದಶಿರ್ ಮುರಲಿ ಕಡೆಕಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ಈ ಸಂದರ್ಭದಲ್ಲಿ ಜಾಹ್ನವಿ ಅನಂತ ಭಟ್, ಪುತ್ರ ಆಶ್ರಯ ಭಟ್, ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ದಿನೇಶ್ ಪಿ.ಪೂಜಾರಿ, ಕಾರ್ಯದರ್ಶಿ ಸಿಎ ಪ್ರದೀಪ್ ಜೋಗಿ, ನಿವೃತ್ತ ಮುಖ್ಯೋಪಾಧ್ಯಾಯ ಕೆ.ಸುಬ್ರಹ್ಮಣ್ಯ ಭಟ್ ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯಿನಿ ಅನಸೂಯ ಸ್ವಾಗತಿಸಿದರು. ಹಿರಿಯ ಶಿಕ್ಷಕ ಎಚ್.ಎನ್.ಶೃಂಗೇಶ್ವರ ಕಾರ್ಯಕ್ರಮ ನಿರ್ವಹಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News