ಬೈಂದೂರು ಕಾಲೇಜಿಗೂ ಹಬ್ಬಿದ ಕೇಸರಿ ಶಾಲು ವಿವಾದ

Update: 2022-02-04 15:31 GMT

ಕುಂದಾಪುರ, ಫೆ.4: ಬೈಂದೂರು ತಾಲೂಕಿನ ಎರಡು ಸರಕಾರಿ ಕಾಲೇಜಿನಲ್ಲಿಯೂ ಕೇಸರಿ ಶಾಲು ವಿವಾದ ಸೃಷ್ಟಿಯಾಗಿದೆ. ಬೈಂದೂರು ಸರಕಾರಿ ಕಾಲೇಜಿನ ಮುನ್ನೂರಕ್ಕೂ ಅಧಿಕ ವಿದ್ಯಾರ್ಥಿಗಳು ಇಂದು ಕೇಸರಿ ಶಾಲು ಧರಿಸಿ ಕಾಲೇಜಿಗೆ ಹಾಜರಾಗಿದ್ದಾರೆ.

ಬೈಂದೂರಿನ ಸರಕಾರಿ ಪದವಿ ಪೂರ್ವ ಕಾಲೇಜು ಹಾಗೂ ನಾವುಂದ ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಿ ಕಾಲೇಜು ಪ್ರವೇಶಕ್ಕೆ ಅವಕಾಶ ನೀಡಬಾರದು ಎಂದು ಆಗ್ರಹಿಸಿ ವಿದ್ಯಾರ್ಥಿಗಳು ಕೇಸರಿ ಶಾಲು ತೊಟ್ಟು ಬಂದಿದ್ದಾರೆ ಎನ್ನಲಾಗಿದೆ.

ಈ ವೇಳೆಯಲ್ಲಿ ಕಾಲೇಜಿನ ಉಪನ್ಯಾಸಕರು ಹಿಜಾಬ್ ಹಾಗೂ ಕೇಸರಿ ಶಾಲು ಧರಿಸದಿದ್ದರೆ ಮಾತ್ರವೇ ತರಗತಿಗೆ ಪ್ರವೇಶ ನೀಡುವುದಾಗಿ ತಿಳಿಸಿದ್ದಾರೆ. ಈ ವೇಳೆಯಲ್ಲಿ ಉಪನ್ಯಾಸಕರು ಹಾಗೂ ಸಂಘಟನೆಯ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದೆ. ಸತತ ವಾಗ್ವಾದದ ಬಳಿಕ ಹಿಜಾಬ್ ಧರಿಸಿದವರನ್ನು ಹಾಗೂ ಕೇಸರಿ ಶಾಲು ಧರಿಸಿದವರನ್ನು ತರಗತಿಗೆ ಪ್ರವೇಶಿಸಲು ಅವಕಾಶ ನೀಡಲಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News