ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ
ಉಡುಪಿ, ಫೆ.5: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲೆಯ ವಿವಿಧ ಆರೋಗ್ಯ ಸಂಸ್ಥೆಗಳಲ್ಲಿ ಖಾಲಿ ಇರುವ ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ಹುದ್ದೆಗೆ ಮಾಸಿಕ 15,000 ರೂ. ವೇತನದಂತೆ 6 ತಿಂಗಳ ಅವಧಿಗೆ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು, ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ತರಬೇತಿ ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಫೆಬ್ರವರಿ 11 ಕೊನೆಯ ದಿನವಾಗಿದ್ದು, ಅರ್ಜಿ ನಮೂನೆ ಯನ್ನು ನಗರದ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯವರ ಕಚೇರಿಯಿಂದ ಪಡೆದುಕೊಳ್ಳಬಹುದು. ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳಿಗೆ ಫೆ.16ರಂದು ಬೆಳಗ್ಗೆ 10:30ಕ್ಕೆ ಸಂದರ್ಶನ ನಡೆಯಲಿದ್ದು, ವಿದ್ಯಾರ್ಹತೆಯ ಎಲ್ಲಾ ಮೂಲ ದಾಖಲೆಗಳೊಂದಿಗೆ ಹಾಜರಾಗ ಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಕಚೇರಿ ದೂರವಾಣಿ ಸಂಖ್ಯೆ: 0820-2536650ನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.