​ಪದ್ಮಶ್ರೀ ಸುಕ್ರೀ ಬೊಮ್ಮಗೌಡ ಫೆ. 13ರಂದು ಉಡುಪಿಗೆ

Update: 2022-02-09 16:03 GMT

ಉಡುಪಿ, ಫೆ.9: ಮದ್ಯ ವ್ಯಸನಿಗಳ ಮಕ್ಕಳ ಜಾಗೃತಿ ಸಪ್ತಾಹ ಫೆ.13ರಂದು ಉಡುಪಿಯಲ್ಲಿ ನಡೆಯಲಿದ್ದು, ಇದರಲ್ಲಿ ಪದ್ಮಶ್ರೀ ಪ್ರಶಸ್ತಿ ವಿಜೇತೆ ಉತ್ತರ ಕನ್ನಡದ ಸುಕ್ರೀ ಬೊಮ್ಮಗೌಡ ಭಾಗವಹಿಸಲಿದ್ದಾರೆ.

ದೊಡ್ಡಣಗುಡ್ಡೆಯ ಡಾ.ಎ.ವಿ.ಬಾಳಿಗಾ ಸ್ಮಾರಕ ಆಲಸ್ಪತ್ರೆ, ರೋಟರಿ ಕ್ಲಬ್ ಮಣಿಪಾಲ, ಕೋಟರ್ಯಾಕ್ಟ್ ಕ್ಲಬ್ ಆಫ್ ಮಣಿಪಾಲ, ಐಎಂಎ ಉಡುಪಿ-ಕರಾವಳಿ ಶಾಖೆ, ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ, ಉಡುಪಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಉಡುಪಿ ವಕೀಲರ ಸಂಘ ಹಾಗೂ ಬಡಗುಬೆಟ್ಟು ಕ್ರೆಡಿಟ್ ಕೋಆಪರೇಟಿವ್ ಸೊಸೈಟಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಮದ್ಯವ್ಯಸನಿಗಳ ಮಕ್ಕಳ ಜಾಗೃತಿ ಸಪ್ತಾಹ ನಡೆಯಲಿದೆ.

ಸಪ್ತಾಹವನ್ನು ಫೆ.13ರ ರವಿವಾರ ಬೆಳಗ್ಗೆ 10:30ಕ್ಕೆ ಬಡಗುಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಜಗನ್ನಾಥ ಭವನದಲ್ಲಿ ಸುಕ್ರಿ ಬೊಮ್ಮಗೌಡ ಉದ್ಘಾಟಿಸಲಿದ್ದಾರೆ. ಎ.ವಿ.ಬಾಳಿಗಾ ಸ್ಮಾರಕ ಸಮೂಹ ಸಂಸ್ಥೆಗಳ ನಿರ್ದೇಶಕ ಡಾ.ಪಿ.ವಿ.ಭಂಡಾರಿ ಅಧ್ಯಕ್ಷತೆ ವಹಿಸಲಿದ್ದಾರೆ.

ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಉಡುಪಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್. ಹಾಗೂ ಉಡುಪಿ ಇಲ್ಲಾ ಸಹಕಾರಿ ಯೂನಿಯನ್‌ನ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ಅಂತಾರಾಷ್ಟ್ರೀಯ ಖ್ಯಾತಿಯ ಜಾದುಗಾರರಾದ ಪ್ರೊ.ಶಂಕರ್, ಐಎಂಎ ಉಡುಪಿ ಕರಾವಳಿಯ ಅಧ್ಯಕ್ಷ ಡಾ.ವಿನಾಯಕ್ ಶೆಣೈ ಹಾಗೂ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಗೌರವಾಧ್ಯಕ್ಷ ವಿಶ್ವನಾಥ ಶೆಣೈ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಸಂಘಟಕರ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News