ಉಡುಪಿ ಜಿಲ್ಲೆಯಲ್ಲಿ 78 ಕೋವಿಡ್ ಪಾಸಿಟಿವ್; 557 ಮಂದಿ ಸೋಂಕಿನಿಂದ ಗುಣಮುಖ

Update: 2022-02-10 13:39 GMT

ಉಡುಪಿ, ಫೆ.10: ಜಿಲ್ಲೆಯಲ್ಲಿ ಗುರುವಾರ ಒಟ್ಟು 78 ಮಂದಿಯಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದೆ. ದಿನದಲ್ಲಿ 557 ಮಂದಿ ಚಿಕಿತ್ಸೆಯ ಬಳಿಕ ಸೋಂಕಿನಿಂದ ಚೇತರಿಸಿಕೊಂಡಿದ್ದರೆ, ಸದ್ಯ ಚಿಕಿತ್ಸೆಯಲ್ಲಿರುವವರ ಸಂಖ್ಯೆ 994ಕ್ಕೆ ಇಳಿದಿದೆ.

ಸತತ ಎರಡನೇ ದಿನ ಜಿಲ್ಲೆಯಲ್ಲಿ ಕೋವಿಡ್‌ಗೆ ಯಾರೂ ಬಲಿಯಾಗಿಲ್ಲ. ಇಂದು ಪಾಸಿಟಿವ್ ಬಂದ 78 ಮಂದಿಯಲ್ಲಿ 39 ಮಂದಿ ಪುರುಷರು ಹಾಗೂ 39 ಮಂದಿ ಮಹಿಳೆಯರಿದ್ದಾರೆ. ಇವರಲ್ಲಿ 46 ಮಂದಿ ಉಡುಪಿ ತಾಲೂಕಿಗೆ, 16 ಮಂದಿ ಕುಂದಾಪುರ ಹಾಗೂ 16 ಮಂದಿ ಕಾರ್ಕಳ ತಾಲೂಕಿಗೆ ಸೇರಿದವರು. ಪಾಸಿಟಿವ್ ಬಂದವರಲ್ಲಿ 73 ಮಂದಿಗೆ ಅವರವರ ಮನೆಗಳಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲೆಯ ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವವರ ಸಂಖ್ಯೆ 84ಕ್ಕಿಳಿದಿದೆ.

ಬುಧವಾರ 557 ಮಂದಿ ರೋಗಮುಕ್ತರಾಗಿದ್ದು, ಕೊರೋನದಿಂದ ಜ.1ರ ನಂತರ ಚೇತರಿಸಿಕೊಂಡವರ ಸಂಖ್ಯೆ 16954ಕ್ಕೇರಿದೆ. ನಿನ್ನೆ ಜಿಲ್ಲೆಯ ಒಟ್ಟು 1757 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಜ.1ರ ಬಳಿಕ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ 17,839ಕ್ಕೇರಿದೆ.

1586 ಮಂದಿಗೆ ಲಸಿಕೆ: ಜಿಲ್ಲೆಯಲ್ಲಿ ಇಂದು ಒಟ್ಟು 1586 ಮಂದಿ ಕೋವಿಡ್ ನಿಯಂತ್ರಣಕ್ಕಿರುವ ಲಸಿಕೆಯನ್ನು ಪಡೆದಿದ್ದಾರೆ. ಇವರಲ್ಲಿ 165 ಮಂದಿ 60 ವರ್ಷ ಮೇಲಿನ ಹಿರಿಯ ನಾಗರಿಕರು ಸೇರಿದಂತೆ ಒಟ್ಟು 219 ಮಂದಿ ಮುನ್ನೆಚ್ಚರಿಕೆ ಒಂದು ಡೋಸ್ ಲಸಿಕೆಯನ್ನು ಪಡೆದಿದ್ದಾರೆ.

ಉಳಿದಂತೆ 706 ಮಂದಿ ಮೊದಲ ಡೋಸ್ ಹಾಗೂ 661 ಮಂದಿ ಎರಡನೇ ಡೋಸ್ ಲಸಿಕೆ ಪಡೆದಿದ್ದಾರೆ. 15ರಿಂದ 18 ವರ್ಷದೊಳಗಿನವರಲ್ಲಿ ಒಬ್ಬರು ಮೊದಲ ಡೋಸ್ ಹಾಗೂ 138 ಮಂದಿ ಎರಡನೇ ಡೋಸ್ ಲಸಿಕೆ ಪಡೆದಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News