ಜನಜಾಗೃತಿಗಾಗಿ ಕಾಪು ಪೇಟೆಯಲ್ಲಿ ಪೊಲೀಸ್ ಪಥ ಸಂಚಲನ

Update: 2022-02-11 06:16 GMT
ಜನಜಾಗೃತಿಗಾಗಿ ಕಾಪು ಪೇಟೆಯಲ್ಲಿ ಪೊಲೀಸ್ ಪಥ ಸಂಚಲನ
  • whatsapp icon

ಕಾಪು, ಫೆ.11: ಹಿಜಾಬ್- ಕೇಸರಿ ವಿವಾದದ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಕಾಪು ವೃತ್ತ ವ್ಯಾಪ್ತಿಯ ಪೊಲೀಸರು ಕಾಪು ಪೇಟೆಯಲ್ಲಿಂದು ಬೆಳಗ್ಗೆ ಪಥ ಸಂಚಲನ ನಡೆಸಿದರು.

ಕಾಪು ವೃತ್ತ ನಿರೀಕ್ಷಕ ಪ್ರಕಾಶ್ ನೇತೃತ್ವದಲ್ಲಿ ಕಾಪು, ಪಡುಬಿದ್ರೆ, ಶಿರ್ವ ಠಾಣಾ ವ್ಯಾಪ್ತಿಯ ಸುಮಾರು 90 ಪೊಲೀಸರು ಈ ಪಥ ಸಂಚಲನದಲ್ಲಿ ಭಾಗಿಯಾಗಿದ್ದರು.

ತಿಮ್ಮೇಶ್, ಪಡುಬಿದಿರೆ ಎಸ್ಸೈ ಅಶೋಕ್ ಕುಮಾರ್, ಶಿರ್ವ ಎಸ್ಸೈ ಪ್ರಕಾಶ್ ಸೇರಿದಂತೆ ಪೊಲೀಸ್ ಅಧಿಕಾರಿಗಳು ಹಾಗೂ ಡಿಆರ್ ತುಕಡಿ ಕೂಡಾ ಪಾಲ್ಗೊಂಡಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News