ಉಡುಪಿ ಜಿಲ್ಲೆ : 74 ಮಂದಿಯಲ್ಲಿ ಕೊರೋನ ಪಾಸಿಟಿವ್ ಪತ್ತೆ

Update: 2022-02-11 13:33 GMT

ಉಡುಪಿ, ಫೆ.11: ಜಿಲ್ಲೆಯಲ್ಲಿ ಇಂದು ಒಟ್ಟು 74 ಮಂದಿ ಕೋವಿಡ್‌ಗೆ ಪಾಸಿಟಿವ್ ಬಂದಿದ್ದಾರೆ. ದಿನದಲ್ಲಿ ಚಿಕಿತ್ಸೆಯ ಬಳಿಕ 209 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದರೆ, ಸದ್ಯ ಚಿಕಿತ್ಸೆಯಲ್ಲಿರುವವರ ಸಂಖ್ಯೆ 859ಕ್ಕೆ ಇಳಿದಿದೆ.

ಇಂದು ಸಹ ಜಿಲ್ಲೆಯಲ್ಲಿ ಕೋವಿಡ್‌ಗೆ ಯಾರೂ ಬಲಿಯಾಗಿಲ್ಲ. ಇಂದು ಪಾಸಿಟಿವ್ ಬಂದ 74 ಮಂದಿಯಲ್ಲಿ ತಲಾ 37 ಮಂದಿ ಪುರುಷರು ಹಾಗೂ ಮಹಿಳೆಯರಿದ್ದಾರೆ. ಇವರಲ್ಲಿ 45 ಮಂದಿ ಉಡುಪಿ ತಾಲೂಕಿಗೆ, 12 ಮಂದಿ ಕುಂದಾಪುರ ಹಾಗೂ 16 ಮಂದಿ ಕಾರ್ಕಳ ತಾಲೂಕಿಗೆ ಸೇರಿದವರು. ಒಬ್ಬರು ಮಾತ್ರ ಹೊರಜಿಲ್ಲೆಯವರು. ಪಾಸಿಟಿವ್ ಬಂದವರಲ್ಲಿ 65 ಮಂದಿಗೆ ಅವರವರ ಮನೆಗಳಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲೆಯ ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವವರ ಸಂಖ್ಯೆ 72ಕ್ಕಿಳಿದಿದೆ. ಇವರಲ್ಲಿ ನಾಲ್ವರು ವೆಂಟಿಲೇಟರ್ ಹಾಗೂ 12 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ.

ಗುರುವಾರ 209 ಮಂದಿ ರೋಗಮುಕ್ತರಾಗಿದ್ದು, ಕೊರೋನದಿಂದ ಜ.1ರ ನಂತರ ಚೇತರಿಸಿಕೊಂಡವರ ಸಂಖ್ಯೆ 17163ಕ್ಕೇರಿದೆ. ನಿನ್ನೆ ಜಿಲ್ಲೆಯ ಒಟ್ಟು 1837 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಜ.1ರ ಬಳಿಕ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ 17,913ಕ್ಕೇರಿದೆ.

2547 ಮಂದಿಗೆ ಲಸಿಕೆ: ಜಿಲ್ಲೆಯಲ್ಲಿ ಇಂದು ಒಟ್ಟು 2547 ಮಂದಿ ಕೋವಿಡ್ ನಿಯಂತ್ರಣಕ್ಕಿರುವ ಲಸಿಕೆಯನ್ನು ಪಡೆದಿದ್ದಾರೆ. ಇವರಲ್ಲಿ 610 ಮಂದಿ 60 ವರ್ಷ ಮೇಲಿನ ಹಿರಿಯ ನಾಗರಿಕರು ಸೇರಿದಂತೆ ಒಟ್ಟು 694 ಮಂದಿ ಮುನ್ನೆಚ್ಚರಿಕೆ ಒಂದು ಡೋಸ್ ಲಸಿಕೆಯನ್ನು ಪಡೆದಿದ್ದಾರೆ.

ಉಳಿದಂತೆ 570 ಮಂದಿ ಮೊದಲ ಡೋಸ್ ಹಾಗೂ 1293 ಮಂದಿ ಎರಡನೇ ಡೋಸ್ ಲಸಿಕೆ ಪಡೆದಿದ್ದಾರೆ. 15ರಿಂದ 18 ವರ್ಷದೊಳಗಿನವರಲ್ಲಿ ಮೂವರು ಮೊದಲ ಡೋಸ್ ಹಾಗೂ 104 ಮಂದಿ ಎರಡನೇ ಡೋಸ್ ಲಸಿಕೆ ಪಡೆದಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News