​ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ಜಿಲ್ಲಾಧ್ಯಕ್ಷರಾಗಿ ಡಾ.ಸುಬ್ರಹ್ಮಣ್ಯ ಭಟ್ ಆಯ್ಕೆ

Update: 2022-02-14 13:37 GMT

ಉಡುಪಿ, ಫೆ.14: ಸಮಾಜದಲ್ಲಿ ವೈಜ್ಞಾನಿಕ ಮನೋಭಾವ ಹಾಗೂ ಚಿಂತನೆಗಳನ್ನು ಬೆಳೆಸುವುದರ ಜೊತೆಗೆ ಮೌಢ್ಯವನ್ನು ದೂರ ಮಾಡುವ ಮತ್ತು ಹಲವಾರು ಪ್ರಗತಿಪರ ಯೋಜನೆಗಳನ್ನು ಕಾರ್ಯಾನುಷ್ಠಾನ ಮಾಡುವ ಉದ್ದೇಶದಿಂದ ಸ್ಥಾಪಿತವಾಗಿರುವ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ಉಡುಪಿ ಜಿಲ್ಲಾಧ್ಯಕ್ಷರಾಗಿ ಡಾ. ಸುಬ್ರಹ್ಮಣ್ಯ ಭಟ್ ಬೈಂದೂರು ಆಯ್ಕೆಯಾಗಿದ್ದಾರೆ.

ರಾಜ್ಯದಾದ್ಯಂತ ಕ್ರಿಯಾಶೀಲವಾಗಿರುವ ಕ.ರಾ.ವೈ.ಸಂ.ಪರಿಷತ್ತು, ರಾಜ್ಯಾಧ್ಯಕ್ಷ ಡಾ.ಹುಲಿಕಲ್ ನಟರಾಜ್ ಇವರ ಮಾರ್ಗದರ್ಶನದಲ್ಲಿ ಜನಸಾಮಾನ್ಯರಲ್ಲೂ ವೈಜ್ಞಾನಿಕ ಚಿಂತನೆಯನ್ನು ಹುಟ್ಟುಹಾಕಿ ಜಾಗೃತಿ ಮೂಡಿುವಲ್ಲಿ ಶಕ್ತಿಮೀರಿ ಪ್ರಯತ್ನಿಸುತ್ತಿದೆ.

ಇತ್ತೀಚೆಗೆ ಉಡುಪಿಯಲ್ಲಿ ನಡೆದ ಸಂಘಟನೆಯ ಸದಸ್ಯರ ಸಭೆಯಲ್ಲಿ ವೃತ್ತಿಯಲ್ಲಿ ವೈದ್ಯರಾಗಿ, ಬೈಂದೂರಿನ ಸಂವೇದನಾ ವಿಜ್ಞಾನ ವಾಣಿಜ್ಯ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರೂ ಆಗಿರುವ ಡಾ. ಸುಬ್ರಹ್ಮಣ್ಯ ಭಟ್ ಅವರನ್ನು ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಅಲ್ಲದೇ ಜಿಲ್ಲಾ ಕಾರ್ಯಕಾರಿ ಸಮಿತಿಯನ್ನು ರಚಿಸಲಾಗಿದೆ.

ಗೌರವಾಧ್ಯಕ್ಷರಾಗಿ ಜಗನ್ನಾಥ ಪನ್ಸಾಲೆ, ಉಪಾಧ್ಯಕ್ಷರಾಗಿ ವಸಂತಿ ಶೆಟ್ಟಿ ಬ್ರಹ್ಮಾವರ ಮತ್ತು ಚಂದ್ರ ನಾಯ್ಕ್ ಎಚ್., ಪ್ರಧಾನ ಕಾರ್ಯದರ್ಶಿಯಾಗಿ ಡಾ.ಕಿಶೋರಕುಮಾರ ಶೆಟ್ಟಿ, ಸಹ ಕಾರ್ಯದರ್ಶಿಯಾಗಿ ಹರೀಶ ಕಟಪಾಡಿ, ಸಂಘಟನಾ ಕಾರ್ಯದರ್ಶಿಯಾಗಿ ರವೀಂದ್ರ ಎಚ್, ಕೋಶಾಧ್ಯಕ್ಷರಾಗಿ ಪ್ರಕಾಶ ಹೆಬ್ಬಾರ್, ಸಂಚಾಲಕರಾಗಿ ಸುಕುಮಾರ ಮುನಿಯಾಲ್ ಹಾಗೂ ಇಂದಿರಾ ಬುಡ್ನಾರ್ ಇವರನ್ನು ಆಯ್ಕೆ ಮಾಡಲಾಗಿದೆ.

ಸಂಘಟನೆಯ ನಿರ್ದೇಶಕರಾಗಿ ಬೈಕಾಡಿ ಮಂಜುನಾಥ ರಾವ್ ಶಿವಪುರ, ಡಾ. ಕೆ.ಪಿ.ಮಹಾಲಿಂಗಯ್ಯ, ವೆಂಕಟೇಶ ಭಟ್, ಗಣಪತಿ ಹೋಬಳಿದಾರ, ಜಗದೀಶ ದೇವಾಡಿಗ, ಅನ್ನಪೂರ್ಣ ಸಿದ್ದೇಶಪ್ಪ, ಸೀತಾನದಿ ವಿಜೇಂದ್ರ ಶೆಟ್ಟಿ ಹೆಬ್ರಿ, ಶಿವಪುರ ಮುರಳೀಧರ ಭಟ್ ಹೆಬ್ರಿ, ಡಾ. ಕಾಂತಿ ಹರೀಶ್, ಶಾಂತಿ ಪಿರೇರಾ ಇವರನ್ನು ಆಯ್ಕೆ ಮಾಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News