ಎಸ್‌ಡಿಎಂ ಕುತ್ಪಾಡಿಯಲ್ಲಿ ಕ್ಯಾನ್ಸರ್ ಜಾಗೃತಿ, ಉಚಿತ ತಪಾಸಣೆ

Update: 2022-02-16 15:06 GMT

ಉಡುಪಿ, ಫೆ.16: ಕುತ್ಪಾಡಿಯ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯ ಪ್ರಸೂತಿತಂತ್ರ ಮತ್ತು ಸ್ತ್ರೀರೋಗ ವಿಭಾಗದಿಂದ ಗರ್ಭಾಶಯದ ಕೊರಳಿನ ಕ್ಯಾನ್ಸರ್ ಹಾಗೂ ಸ್ತನದ ಕ್ಯಾನ್ಸರ್‌ನ ಉಚಿತ ತಪಾಸಣೆ ಹಾಗೂ ಜಾಗೃತಿ ಸಪ್ತಾಹವು ಕಾಲೇಜಿನಲ್ಲಿ ನಡೆಯಿತು.

ಮುಖ್ಯ ಅತಿಥಿಯಾಗಿ ಆಗಮಿಸಿದ ಎಲ್ಲೈಸಿ ಉಡುಪಿ ಶಾಖೆಯ ಸೇಲ್ಸ್ ಮ್ಯಾನೇಜರ್ ಸದಾಶಿವ ಭಟ್ ಸಪ್ತಾಹವನ್ನು ಉದ್ಘಾಟಿಸಿದರು. ಎಲ್ಲೈಸಿಯ ಉತ್ಪನ್ನಗಳ ಮ್ಯಾನೇಜರ್ ಪಾಂಡುರಂಗ ಎನ್. ಪೈ, ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ನಾಗರಾಜ್ ಎಸ್. ಉಪಸ್ಥಿತರಿದ್ದರು.

ಎಸ್‌ಡಿಎಂ ಆಯುರ್ವೇದ ಕಾಲೇಜಿನ ಪ್ರಾಂಶುಪಾಲೆ ಡಾ. ಮಮತಾ ಕೆ.ವಿ. ಅಧ್ಯಕ್ಷತೆ ವಹಿಸಿ ಮಾತನಾಡಿ, ಮಹಿಳೆಯರು ನಿಯಮಿತವಾಗಿ ತಪಾಸಣೆಗೆ ಒಳಗಾಗುವುದರಿಂದ ಆರಂಭಿಕ ಹಂತದಲ್ಲಿ ರೋಗವನ್ನು ಪತ್ತೆ ಹಚ್ಚಿದರೆ ಚಿಕಿತ್ಸೆ ಸುಲಭಸಾಧ್ಯವಾಗುತ್ತದೆ ಎಂದರು.

ಕಾಲೇಜಿನ ಸ್ನಾತಕೋತ್ತರ ವಿಭಾಗದ ಡೀನ್ ಡಾ. ನಿರಂಜನ್ ರಾವ್, ಸ್ನಾತಕ ವಿಭಾಗದ ಡೀನ್ ಡಾ. ವೀರಕುಮಾರ ಕೆ., ಪ್ರಸೂತಿತಂತ್ರ ಮತ್ತು ಸ್ತ್ರೀರೋಗ ವಿಭಾಗದ ಮುಖ್ಯಸ್ಥ ಡಾ.ರಮಾದೇವಿ ಜಿ. ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಪ್ರಸೂತಿತಂತ್ರ ಮತ್ತು ಸ್ತ್ರೀರೋಗ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ಅರ್ಪಣಾ ಜೈನ್ ಸ್ವಾಗತಿಸಿ, ಡಾ. ರೇಶ್ಮಿ ರಾಜಗೋಪಾಲ್ ವಂದಿಸಿದರು. ಸ್ನಾತಕೋತ್ತರ ವಿದ್ಯಾರ್ಥಿಗಳಾದ ಡಾ. ಅರ್ಚನಾ ಮತ್ತು ಡಾ. ಮೆಹಕ್ ಕಾರ್ಯಕ್ರಮ ನಿರೂಪಿಸಿದರು.150ಕ್ಕೂ ಅಧಿಕ ಮಂದಿ ಶಿಬಿರದ ಸದುಪಯೋಗ ಪಡೆದುಕೊಂಡರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News