ಬ್ರಹ್ಮಾವರ ಕಾಲೇಜಿಗೆ ಉಡುಪಿ ಜಿಲ್ಲಾಧಿಕಾರಿ ಭೇಟಿ
Update: 2022-02-16 16:40 GMT
ಉಡುಪಿ, ಫೆ.16: ವಸ್ತ್ರ ಸಂಹಿತೆ ಸಂಬಂಧ ಹೈಕೋರ್ಟ್ ನೀಡಿರುವ ಮಧ್ಯಂತರ ಆದೇಶದ ಪಾಲನೆ ಹಿನ್ನೆಲೆಯಲ್ಲಿ ಇಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ವಿವಿಧ ಕಾಲೇಜಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಬ್ರಹ್ಮಾವರ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ, ಉಚ್ಛ ನ್ಯಾಯಾ ಲಯದ ಆದೇಶವನ್ನು ಸಮರ್ಪಕವಾಗಿ ಪಾಲನೆ ಮಾಡುವ ಕುರಿತು ಎಲ್ಲಾ ಕಾಲೇಜುಗಳ ಪ್ರಾಂಶುಪಾಲರಿಗೆ ಸೂಚನೆ ನೀಡಿದರು.