ಶಾಂತಿನಿಕೇತನಕ್ಕೆ ರಾಜ್ಯ ಮಟ್ಟದ ಯುವ ಮಂಡಳ ಪ್ರಶಸ್ತಿ
Update: 2022-02-22 17:49 GMT
ಉಡುಪಿ, ಫೆ.22:ಕೇಂದ್ರ ಸರಕಾರದ ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯದ ನೆಹರು ಯುವ ಕೇಂದ್ರ ಸಂಘಟನೆ ನೀಡುವ ರಾಜ್ಯ ಮಟ್ಟದ ಅತ್ಯುತ್ತಮ ಯುವ ಮಂಡಳ 2020-21ನೇ ಸಾಲಿನ ಪ್ರಶಸ್ತಿಗೆ ಹೆಬ್ರಿ ತಾಲೂಕು ಕುಚ್ಚೂರು ಕುಡಿಬೈಲು ಶಾಂತಿನಿಕೇತನ ಯುವ ವೃಂದ ಆಯ್ಕೆಯಾಗಿದೆ. ಈ ಪ್ರಶಸ್ತಿ 75 ಸಾವಿರ ರೂ.ನಗದು ಹಾಗೂ ಪ್ರಶಂಸ ಪತ್ರವನ್ನು ಒಳಗೊಂಡಿದೆ.
ಕಳೆದ 9 ವರ್ಷಗಳಿಂದ ಸಮಾಜ ಸೇವೆ ಹಾಗೂ ಸಾರ್ವಜನಿಕ ಒಳಿತಿಗಾಗಿ ಶಾಂತಿನಿಕೇತನ ಯುವ ವೃಂದವು ಸಮಾಜ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಮಾದರಿ ಎನಿಸಿದ್ದು, ಈ ಸಂಘಕ್ಕೆ ರಾಜ್ಯ ಪ್ರಶಸ್ತಿ ಬಂದಿರುವುದು ಜಿಲ್ಲೆಗೆ ಗೌರವ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದ್ದಾರೆ.