ಉಡುಪಿ: ಮನೆಗೆ ನುಗ್ಗಿ ಲ್ಯಾಪ್‌ಟಾಪ್, ಮೊಬೈಲ್ ಕಳವು

Update: 2022-02-24 18:07 GMT

ಉಡುಪಿ, ಫೆ.24: ಮನೆಗೆ ನುಗ್ಗಿ ಸಾವಿರಾರು ರೂ. ಮೌಲ್ಯದ ಸೊತ್ತು ಗಳನ್ನು ಕಳವು ಮಾಡಿರುವ ಘಟನೆ ಫೆ.23ರಂದು ಅಪರಾಹ್ನ ವೇಳೆ ನಗರದ ಮಿಷನ್ ಕಂಪೌಂಡ್ ಬಳಿ ನಡೆದಿದೆ.

ನೊಯಲ್ ಪ್ರಶಾಂತ್ ಕರ್ಕಡ ಎಂಬವರು ಮನೆಯಲ್ಲಿ ವಯಸ್ಸಾದ ತಾಯಿಯನ್ನು ಬಿಟ್ಟು ಕೆಲಸಕ್ಕೆ ಹೋಗಿದ್ದು, ಈ ವೇಳೆ ಮನೆಗೆ ನುಗ್ಗಿದ ಕಳ್ಳರು, ಲ್ಯಾಪ್ ಟಾಪ್ ಮತ್ತು ಮೊಬೈಲ್ನ್ನು ಕಳವು ಮಾಡಿಕೊಂಡು ಹೋಗಿದ್ದಾರೆ. ಇವುಗಳ ಒಟ್ಟು ಮೌಲ್ಯ 52 ಸಾವಿರ ರೂ. ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News