ಉಡುಪಿ: ಪ್ರೌಢಶಾಲಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಮುಂದುವರಿಕೆ

Update: 2022-02-25 14:15 GMT

ಉಡುಪಿ, ಫೆ.25: ಪ್ರಸ್ತುತ ಜಿಲ್ಲೆಯಲ್ಲಿ ನಡೆಯುತ್ತಿರುವ ಹಿಜಾಬ್ - ಕೇಸರಿ ಶಾಲು ವಿವಾದದ ಹಿನ್ನೆಲೆಯಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಮಾರ್ಚ್ 2ರ ಬೆಳಗ್ಗೆ 6 ಗಂಟೆಯಿಂದ ಮಾರ್ಚ್ 12ರ ಸಂಜೆ 6 ಗಂಟೆಯವರೆಗೆ (ರವಿವಾರ ಹೊರತುಪಡಿಸಿ) ಜಿಲ್ಲಾ ವ್ಯಾಪ್ತಿಯ ಎಲ್ಲಾ ಪ್ರೌಢಶಾಲೆಗಳ ಸುತ್ತಮುತ್ತಲಿನ 200 ಮೀ. ಪ್ರದೇಶದಲ್ಲಿ ದಂಡ ಪ್ರಕ್ರಿಯೆ ಸಂಹಿತೆ ಕಲಂ 144ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಕೂರ್ಮರಾವ್ ಎಂ. ಆದೇಶ ಹೊರಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News