ಬೆಂಗಳೂರಿನ ಗಾನಸೌರಭ ಯಕ್ಷಗಾನ ಶಾಲೆಗೆ ನಿಡಂಬೂರು ಬೀಡು ಬಲ್ಲಾಳ ಪ್ರಶಸ್ತಿ

Update: 2022-02-26 15:34 GMT

ಉಡುಪಿ, ಫೆ.26: ಅಂಬಲಪಾಡಿ ದೇವಳದ ಧರ್ಮದರ್ಶಿಯಾಗಿ ಕಲೆ, ಸಂಸ್ಕೃತಿಯನ್ನು ವಿಶೇಷವಾಗಿ ಪ್ರೋತ್ಸಾಹಿಸುತಿದ್ದ ನಿ.ಬೀ.ಅಣ್ಣಾಜಿ ಬಲ್ಲಾಳರ ಹೆಸರಿನಲ್ಲಿ ಸ್ಥಾಪಿಸಲಾದ ‘ನಿಡಂಬೂರುಬೀಡು ಬಲ್ಲಾಳ ಪ್ರಶಸ್ತಿ’ಗೆ ಎರಡು ದಶಕಗಳಿಂದ ಬೆಂಗಳೂರಿನಲ್ಲಿ ಯಕ್ಷಗಾನ ಕಲಿಕೆ, ಪ್ರದರ್ಶನ, ಪ್ರಚಾರಕ್ಕೆ ಸಂಬಂಧಿಸಿದಂತೆ ಕಾರ್ಯನಿರ್ವಹಿಸುತ್ತಿರುವ ಗಾನಸೌರಭ ಯಕ್ಷಗಾನ ಶಾಲೆ ಆಯ್ಕೆಯಾಗಿದೆ.

ಪ್ರಶಸ್ತಿಯು ಹತ್ತು ಸಾವಿರ ರೂ.ನಗದು ಪುರಸ್ಕಾರವನ್ನೊಳಗೊಂಡಿದೆ. ಸುಮಾರು ಮೂವತ್ತು ವರ್ಷ ವಿವಿಧ ಮೇಳಗಳಲ್ಲಿ ಕಲಾವಿದರಾಗಿ ಸೇವೆ ಸಲ್ಲಿಸಿದ್ದ ಶಿವಕುಮಾರ್ ಬೇಗಾರ್ ಈ ಸಂಸ್ಥೆ ಸ್ಥಾಪಿಸಿದ್ದು, ಬೆಂಗಳೂರಿನ ಹಲವು ಕಡೆಗಳಲ್ಲಿ ತೆಂಕು ಬಡಗಿನ ಆಸಕ್ತ ಕಲಾದರಿಗೆ ತರಬೇತಿ ನೀಡುತ್ತಾ ಈ ಕಲೆಯ ಸಂವರ್ಧನೆಗೆ ಕೆಲಸ ಮಾಡುತ್ತಿದೆ.

ಮಾ.6ರ ರವಿವಾರ ಕಂಬ್ಳಕಟ್ಟದ ಶ್ರೀಜನಾರ್ದನ ಮಂಟಪದಲ್ಲಿ ನಡೆಯುವ ಸಂಸ್ಥೆಯ 64ನೇ ವಾರ್ಷಿಕೋತ್ಸವದಂದು ಪ್ರಶಸ್ತಿ ಪ್ರದಾನ ಮಾಡಲಾಗುವುದೆಂದು ಸಂಸ್ಥೆಯ ಅಧ್ಯಕ್ಷ ಕೆ. ಅಜಿತ್ ಕುಮಾರ್, ಕಾರ್ಯದರ್ಶಿ ಸುನಿಲ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News