ಅಂಬಲಪಾಡಿ ಯಕ್ಷಗಾನ ಮಂಡಳಿ ಪ್ರಶಸ್ತಿಗೆ ಆಯ್ಕೆ

Update: 2022-02-27 16:54 GMT
ಗಣಪತಿ, ರಾಜೀವ, ಪದ್ಮನಾಭ

ಉಡುಪಿ, ಫೆ.27: ಅಂಬಲಪಾಡಿ ಶ್ರೀಲಕ್ಷ್ಮೀ ಜನಾರ್ದನ ಯಕ್ಷಗಾನ ಕಲಾ ಮಂಡಳಿಯ 64ನೇ ವಾರ್ಷಿಕೋತ್ಸವವು ಮಾ.6ರಂದು ಸಂಜೆ 6ಗಂಟೆಗೆ ಅಂಬಲಪಾಡಿಯ ಶ್ರೀ ಜನಾರ್ದನ ಮಂಟಪದಲ್ಲಿ ಜರಗಲಿದೆ.

ಈ ಸಂದರ್ಭದಲ್ಲಿ ಕಿದಿಯೂರು ಜನಾರ್ದನ ಆಚಾರ್ಯ ಸ್ಮರಣಾರ್ಥ ಪ್ರಶಸ್ತಿಯನ್ನು ಗಣಪತಿ ಭಟ್‌ಗೆ, ಕಪ್ಪೆಟ್ಟು ಬಾಬು ಶೆಟ್ಟಿಗಾರ್ ಸ್ಮರಣಾರ್ಥ ಪ್ರಶಸ್ತಿ ಯನ್ನು ತೋನ್ಸೆ ರಾಜೀವಗೆ ಹಾಗೂ ಕುತ್ಪಾಡಿ ಆನಂದ ಗಾಣಿಗ ಸ್ಮರಣಾರ್ಥ ಪ್ರಶಸ್ತಿಯನ್ನು ಪದ್ಮನಾಭ ಗಾಣಿಗ ಇವರಿಗೆ ಪ್ರದಾನ ಮಾಡಲಾಗುವುದು.

ಅಧ್ಯಕ್ಷತೆಯನ್ನು ದೇವಳದ ಧರ್ಮದರ್ಶಿ ಡಾ. ನಿ.ಬೀ. ವಿಜಯ ಬಲ್ಲಾಳ್ ವಹಿಸಲಿರುವರು. ಮುಖ್ಯ ಅತಿಥಿಗಳಾಗಿ ಎ.ಸಂಕಪ್ಪ, ಅಡ್ವೆ ಲಕ್ಷ್ಮೀಶ ಆಚಾರ್ಯ ಹಾಗೂ ಬೇಗಾರು ಶಿವಕುಮಾರ್ ಭಾಗವಹಿಸಲಿರುವರು. ಬಳಿಕ ನರಸಿಂಹ ತುಂಗ ಇವರ ನಿರ್ದೇಶನದಲ್ಲಿ ಬಾಲ ಕಲಾವಿದರಿಂದ ಮೈಂದದ್ವಿವಿದ ಕಾಳಗ ಮತ್ತು ರುಗ್ಮಾವತಿ ಕಲ್ಯಾಣ ಯಕ್ಷಗಾನ ಪ್ರದರ್ಶನಗೊಳ್ಳಲಿದೆ ಎಂದು ಮಂಡಳಿಯ ಅಧ್ಯಕ್ಷ ಕೆ.ಅಜಿತ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News