ಮಹಾಶಿವರಾತ್ರಿ ಮಹೋತ್ಸವ ಕಾರ್ಯಕ್ರಮ ಉದ್ಘಾಟನೆ

Update: 2022-03-01 14:17 GMT

ಮಣಿಪಾಲ, ಮಾ.1: ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾ ಲಯ ಮಣಿಪಾಲ ಶಾಖೆಯಲ್ಲಿ ಹಮ್ಮಿಕೊಳ್ಳಲಾದ ಮಹಾ ಶಿವರಾತ್ರಿ ಮಹೋತ್ಸವ ಕಾರ್ಯಕ್ರಮಕ್ಕೆ ಮಂಗಳವಾರ ಚಾಲನೆ ನೀಡಲಾಯಿತು.

ಮುಖ್ಯ ಅತಿಥಿಗಳಾಗಿ ಉಡುಪಿ ನಗರಸಭೆ ಪೌರಾಯುಕ್ತ ಡಾ.ಉದಯ್ ಶೆಟ್ಟಿ, ಜಿಪಂ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಕೆಂಪೇಗೌಡ ಮಾತನಾಡಿದರು.

ನಿವೃತ್ತ ಡಿವೈಎಸ್ಪಿ ಶ್ರೀರಾಮ್ ಹಾಗೂ ಮಣಿಪಾಲ ಕೆಎಂಸಿಯ ವೈದ್ಯ ಡಾ.ಬಿ.ಕೆ.ರಮೇಶ್ ಬಾಬು ಅವರನ್ನು ಸನ್ಮಾನಿಸಲಾಯಿತು. ಶಾಲಾಮಕ್ಕಳ ಚಿತ್ರಕಲಾ ಸ್ಪರ್ಧೆಯ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾ ಯಿತು. ಬ್ರಹ್ಮಾ ಕುಮಾರೀಸ್ ಉಡುಪಿ ಶಾಖೆಯ ಸಂಚಾಲಕಿ ಬಿ.ಕೆ.ಸುಮ ಉಪಸ್ಥಿತರಿದ್ದರು.

ಹಿರಿಯ ಶಿಕ್ಷಕಿ ಬಿ.ಕೆ.ಸುಜಾತ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಮಣಿಪಾಲ ಶಾಖೆಯ ಸಂಚಾಲಕಿ ಬಿ.ಕೆ.ಸೌರಭ ವಂದಿಸಿ ದರು. ವಿನೂತನ ತಂತ್ರಜ್ಞಾನಗಳ ಮೂಲಕ ವಿವಿಧ ಪ್ರಕಾರದ ಶಿವಲಿಂಗಗಳ ದರ್ಶನ, ಭಾರತದ ಭೂಪಟದಲ್ಲಿ ದ್ವಾದಶ ಜ್ಯೋತಿರ್ಲಿಂಗಗಳ ದರ್ಶನ, ನಿರಂತರ ಕ್ಷೀರಾಭಿಷೇಕ, ವಜ್ರ ಲಿಂಗ, ರುದ್ರಾಕ್ಷಿ ಲಿಂಗ ಹಾಗು ಆಧ್ಯಾತ್ಮಿಕ ಚಿತ್ರ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News