ಹರ್ಷ ಕುಟುಂಬಕ್ಕೆ ಟಿಕೆಟ್ ಕೊಡುವ ಬಗ್ಗೆ ಹೈಕಮಾಂಡ್ ನಿರ್ಧಾರ: ಸಚಿವ ಕೋಟ ಶ್ರೀನಿವಾಸ ಪೂಜಾರಿ

Update: 2022-03-02 15:37 GMT

ಉಡುಪಿ, ಮಾ. 2: ಕೊಲೆಯಾದ ಹರ್ಷ ಕುಟುಂಬಕ್ಕೆ ಬಿಜೆಪಿಯಿಂದ ಟಿಕೆಟ್ ಕೊಡುವ ಬಗ್ಗೆ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತದೆ. ಕಾಂಗ್ರೆಸಿಗರು ಯಾರು ಟಿಕೆಟ್ ಕೊಡಲು ಹೇಳಲು? ಕಾಂಗ್ರೆಸ್‌ನವರದ್ದು ಬೇಜವಾಬ್ದಾರಿ ಹೇಳಿಕೆಯಾಗಿದೆ ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಮಾ.2ರಂದು ಉಡುಪಿ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಸಾರ್ವಜನಿಕ ಅಹವಾಲು ಸ್ವೀಕಾರ ಕಾರ್ಯಕ್ರಮ ದಲ್ಲಿ ಅವರು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು.

ಕಾಂಗ್ರೆಸ್ ಅವಧಿಯಲ್ಲಿ 23 ಹಿಂದೂ ಕಾರ್ಯಕರ್ತರ ಹತ್ಯೆಗಳಾಗಿವೆ. ಆಗ ಕಾಂಗ್ರೆಸಿಗರ ಹೇಳಿಕೆ ಏನಿತ್ತು ಎಂಬುದನ್ನು ನೆನಪಿಸಿಕೊಳ್ಳಬೇಕಾಗಿದೆ. ಅವರು ಮೂಲಭೂತವಾದಿ ಸಂಘಟನೆಯವರಿಗೆ ಬೆಂಬಲ ನೀಡುತ್ತಿ ದ್ದಾರೆ. ಅವರ ಮೇಲಿನ ಕೇಸ್‌ಗಳನ್ನು ವಾಪಾಸು ಪಡೆದಿದ್ದರಿಂದಲೇ ಇವತ್ತು ಕೊಲೆ ಕೃತ್ಯಗಳು ನಡೆಯುತ್ತಿವೆ. ನಮ್ಮ ಸರಕಾರ ಹರ್ಷನ ಕುಟುಂಬಕ್ಕೆ ಸಂಪೂರ್ಣ ನೆರವು ನೀಡಿದೆ ಎಂದು ತಿಳಿಸಿದರು.

ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್, ರಾಜ್ಯ ಕಾರ್ಯಕಾರಿಣಿ ಸದಸ್ಯ ಗುರ್ಮೆ ಸುರೇಶ್ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ, ಸದಾನಂದ ಉಪ್ಪಿನ ಕುದ್ರು, ಜಿಲ್ಲಾ ಉಪಾಧ್ಯಕ್ಷರಾದ ರವಿ ಅಮೀನ್, ಶ್ರೀಶ ನಾಯಕ್, ಸುಪ್ರಸಾದ್ ಶೆಟ್ಟಿ, ಉಡುಪಿ ನಗರಸಭಾ ಅಧ್ಯಕ್ಷೆ ಸುಮಿತ್ರಾ ನಾಯಕ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News