ಉಡುಪಿ ಜಿಲ್ಲೆಯಲ್ಲಿ ಬಾಲ್ಯ ವಿವಾಹ ನಿಷೇಧ ಅಭಿಯಾನ: ಕೂರ್ಮಾರಾವ್ ಎಂ.

Update: 2022-03-04 14:55 GMT

ಉಡುಪಿ: ಬಾಲ್ಯ ವಿವಾಹ ನಿಷೇಧದ ಕುರಿತು ಜನರಲ್ಲಿ ವ್ಯಾಪಕ ಅರಿವು ಮೂಡಿಸಲು ಜಿಲ್ಲೆಯಲ್ಲಿ ಮಾರ್ಚ್ 6ರಿಂದ 10ರವರೆಗೆ ಎಲ್‌ಇಡಿ ವಾಹನಗಳ ಮೂಲಕ ವಿಶೇಷ ಅಭಿಯಾನ ಕಾರ್ಯಕ್ರಮ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಹೇಳಿದ್ದಾರೆ.

ಶುಕ್ರವಾರ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಕೋರ್ಟ್‌ಹಾಲ್‌ನಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.
ಶುಕ್ರವಾರ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಕೋರ್ಟ್‌ಹಾಲ್‌ನಲ್ಲಿ ನಡೆದ ಸೆಯಅ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು. ಬಾಲ್ಯ ವಿವಾಹ ನಿಷೇದದ ಕುರಿತಂತೆ ಜಿಲ್ಲೆಯ 9 ಹೋಬಳಿಗಳಲ್ಲಿ ಪ್ರತಿ ಹೋಬಳಿಯಲ್ಲಿ 5 ಕಾರ್ಯಕ್ರಮಗಳಂತೆ ಒಟ್ಟು 25 ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದ್ದು, ಕಾರ್ಯಕ್ರಮದಲ್ಲಿ ಎಲ್‌ಇಡಿ ವಾಹನಗಳ ಮೂಲಕ ಕಿರುಚಿತ್ರ ಪ್ರದರ್ಶನ, ಪ್ರತಿಜ್ಞಾ ಸ್ವೀಕಾರ ಕಾರ್ಯಕ್ರಮ, ಸಹಿ ಸಂಗ್ರಹ ಅಭಿಯಾನ, ಮಾನವ ಸರಪಳಿ ರಚನೆ ಮುಂತಾದ ಕಾರ್ಯಕ್ರಮಗಳನ್ನು ಆಯೋಜಿಸುವುದರ ಜೊತೆಗೆ, ಬಾಲ್ಯ ವಿವಾಹದಿಂದ ಪಾರಾದ ವಿದ್ಯಾರ್ಥಿನಿ ಯರಿಂದ ಅಭಿಪ್ರಾಯಗನ್ನು ಪಡೆಯಲಾಗುವುದು ಎಂದರು.

ಜಿಲ್ಲೆಯಲ್ಲಿ ವಲಸೆ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ಜಾಗದಲ್ಲಿ ಕಾರ್ಯಕ್ರಮ ಆಯೋಜಿಸಿ. ಕಾರ್ಯಕ್ರಮ ಏರ್ಪಡಿಸುವ ಕುರಿತಂತೆ ಎಲ್ಲಾ ಸ್ಥಳೀಯ ಜನಪ್ರತಿಧಿಗಳಿಗೆ ಮಾಹಿತಿ ನೀಡುವಂತೆ ಹಾಗೂ ಸ್ತ್ರೀ ಶಕ್ತಿ ಸಂಘದ ಸದಸ್ಯರು, ಸ್ವಯಂಸೇವಾ ಸಂಘಟನೆಗಳ ಸದಸ್ಯರು, ಬಾಲ್ಯ ವಿವಾಹ ನಿಷೇಧ ಕಾಯ್ದೆಯಡಿ, ಬಾಲ್ಯ ವಿವಾಹ ತಡೆಗೆ ನಿಯೋಜಿಸಿರುವ ವಿವಿಧ ಅಧಿಕಾರಿಗಳು ಇದರಲ್ಲಿ ಭಾಗವಹಿಸಬೇಕು ಎಂದು ತಿಳಿಸಿದರು.

ಮಾ.6ರಂದು ಬೆಳಗ್ಗೆ 9:30 ಗಂಟೆಗೆ ಉಡುಪಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಈ ಅಭಿಯಾನಕ್ಕೆ ಚಾಲನೆ ನೀಡಲಾಗುವುದು ಎಂದೂ ಜಿಲ್ಲಾಧಿಕಾರಿ ವಿವರಿಸಿದರು.

ಸಭೆಯಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಕಿರಣ್ ಫಡ್ನೇಕರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶೇಷಪ್ಪ, ಪೌರಾಯುಕ್ತ ಉದಯ ಶೆಟ್ಟಿ, ಜಿಲ್ಲಾ ಕಾರ್ಮಿಕ ಅಧಿಕಾರಿ ಕುಮಾರ್, ಡಿಹೆಚ್‌ಓಡಾ.ನಾಗಭೂಷಣ ಉಡುಪ, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ. ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News