ಮೂಳೂರು: ಮೀಫ್, ಡಿಕೆಎಸ್‍ಸಿಯಿಂದ ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಕಾರ್ಯಾಗಾರ
ಮಂಗಳೂರು, ಮಾ.5: ಮುಸ್ಲಿಮ್ ಶಿಕ್ಷಣ ಸಂಸ್ಥೆಗಳ ಒಕ್ಕೂಟ(ಮೀಫ್) ದ.ಕ. ಮತ್ತು ಉಡುಪಿ ಜಿಲ್ಲೆ ಹಾಗೂ ಡಿ.ಕೆ.ಎಸ್.ಸಿ. ವತಿಯಿಂದ ಉಡುಪಿ ಜಿಲ್ಲೆಯ ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಕಾರ್ಯಾಗಾರವು ಮೂಳೂರಿನ ಅಲ್-ಇಹ್ಸಾನ್ ಶಿಕ್ಷಣ ಸಂಸ್ಥೆಯಲ್ಲಿ ಶನಿವಾರ ಜರುಗಿತು.
ಮೀಫ್ ವತಿಯಿಂದ ದ.ಕ. ಹಾಗೂ ಉಡುಪಿ ಜಿಲ್ಲೆಯ ವಿವಿಧ ವಿದ್ಯಾಸಂಸ್ಥೆಗಳಲ್ಲಿ ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಅಂತಿಮ ಪರೀಕ್ಷೆ ಎದುರಿಸುವ ಬಗ್ಗೆ ಸರಣಿ ಶೈಕ್ಷಣಿಕ ಕಾರ್ಯಾಗಾರಗಳನ್ನು ಆಯೋಜಿಸಲಾಗುತ್ತಿದ್ದು, ಅದರಂಗವಾಗಿ ನಡೆದ ಈ ಕಾರ್ಯಾಗಾರವನ್ನು ಅಲ್ ಇಹ್ಸಾನ್ ಶಿಕ್ಷಣ ಸಂಸ್ಥೆಯ ಮ್ಯಾನೇಜರ್ ಮೌಲಾನ ಮುಸ್ತಫಾ ಸಅದಿ ಉದ್ಘಾಟಿಸಿದರು.
ಮೀಫ್ ಅಧ್ಯಕ್ಷ ಮೂಸಬ್ಬ ಪಿ. ಬ್ಯಾರಿ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಯಾಗಿ ಜಮೀಯ್ಯತುಲ್ ಫಲಾಹ್ ದ.ಕ. ಹಾಗೂ ಉಡುಪಿ ಜಿಲ್ಲೆ ಇದರ ಅಧ್ಯಕ್ಷ ಶಬಿ ಅಹ್ಮದ್ ಖಾಝಿ ಭಾಗವಹಿಸಿದ್ದರು.
ಅಲ್-ಇಹ್ಸಾನ್ ಶಿಕ್ಷಣ ಸಂಸ್ಥೆಯ ಸಂಚಾಲಕ ಅಡ್ವೋಕೇಟ್ ಮುಹಮ್ಮದ್ ಅಲಿ ಕಾಪು, ಮೀಫ್ ಉಡುಪಿ ಝೋನ್ ಉಪಾಧ್ಯಕ್ಷ ಅಬ್ದುಲ್ ರಹಿಮಾನ್ ಮಣಿಪಾಲ್ ಹಾಗೂ ವಿವಿಧ ವಿದ್ಯಾಸಂಸ್ಥೆಗಳ ಮುಖ್ಯೋಪಾಧ್ಯಾಯಿನಿಯರು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.
ರಾಷ್ಟ್ರೀಯ ತರಬೇತುದಾರ ಜೆ.ಸಿ.ರಾಜೇಂದ್ರ ಭಟ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು.
ಉಡುಪಿ ಜಿಲ್ಲೆಯ 239 ಎಸೆಸೆಲ್ಸಿ ವಿದ್ಯಾರ್ಥಿಗಳು ಪಾಲ್ಗೊಂಡು ಕಾರ್ಯಾಗಾರದ ಪ್ರಯೋಜನ ಪಡೆದರು.
ಅಲ್-ಇಹ್ಸಾನ್ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲ ಹಬೀಬ್ ರಹ್ಮಾನ್ ಕೆ.ಎಸ್. ಸ್ವಾಗತಿಸಿದರು. ಮುಖ್ಯೋಪಾಧ್ಯಾಯಿನಿ ಮಮತಾ ವಂದಿಸಿದರು. ಸಂಯೋಜಕಿ ನಫೀಸ ಕಾರ್ಯಕ್ರಮ ನಿರೂಪಿಸಿದರು.