ಮಾ. 8ರಂದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

Update: 2022-03-07 15:00 GMT

ಉಡುಪಿ, ಮಾ.7: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ, ಜೀವನೋಪಾಯ ಇಲಾಖೆ, ರಾಷ್ಟ್ರೀಯ ಜೀವನೋಪಾಯ ಮಿಷನ್, ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟ, ಜಿಲ್ಲಾ ಮತ್ತು ತಾಲೂಕು ಸ್ತ್ರೀ ಶಕ್ತಿ ಸಂಘಗಳ ಒಕ್ಕೂಟ, ಸಂಜೀನಿ ಜಿಲ್ಲಾ ಅಭಿಯಾನ ನಿರ್ವಹಣಾ ಘಟಕ, ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ (ಎನ್‌ಯುಎಲ್‌ಎಂ) ಹಾಗೂ ಪರ್ಯಾಯ ಶ್ರೀಕೃಷ್ಣಾಪುರ ಮಠ ಇವರ ಸಹಯೋಗದಲ್ಲಿ ಅಂತಾರ್ಟ್ರೋಯ ಮಹಿಳಾ ದಿನಾಚರಣೆ ಹಾಗೂ ಸ್ವ-ಸಹಾಯ ಗುಂಪಿನ ಮಹಿಳೆಯರು ತಯಾರಿಸಿರುವ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳವು ಮಾರ್ಚ್ 8ರಂದು ಬೆಳಗ್ಗೆ 10:30ಕ್ಕೆ ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಉಡುಪಿ ಶಾಸಕ ಕೆ. ರಘುಪತಿ ಭಟ್ ಉದ್ಘಾಟಿಸಲಿದ್ದು, ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ನವೀನ್ ಭಟ್ ವೈ, ಜಿಲ್ಲಾ ಪೋಲೀಸ್ ಅಧೀಕ್ಷಕ ಎನ್. ವಿಷ್ಣುವರ್ಧನ್, ಜಿಲ್ಲಾ ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಲಿರುವರು ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News