ಉಡುಪಿ: ಮಾ. 20ರಂದು ಕನ್ನಡ ನುಡಿವೈಭವ-2022

Update: 2022-03-09 13:51 GMT

ಉಡುಪಿ, ಮಾ.9: ಕರ್ನಾಟಕ ರಾಜ್ಯ ಬರಹಗಾರರ ಸಂಘದ ಕೇಂದ್ರ ಘಟಕ ಹೂವಿನಹಡಗಲಿ ಹಾಗೂ ಇದರ ಉಡುಪಿ ಜಿಲ್ಲಾ ಘಟಕದ ಸಹಯೋಗದಲ್ಲಿ ಉಡುಪಿಯ ಚಿತ್ತರಂಜನ್ ಸರ್ಕಲ್‌ನಲ್ಲಿರುವ ಹಿಂದಿ ಪ್ರಚಾರ ಸಮಿತಿ ಸಭಾ ಭವನದಲ್ಲಿ ಮಾ.20ರ ರವಿವಾರ ಕನ್ನಡ ನುಡಿವೈಭವ-2022 ಹಾಗೂ ಪದಗ್ರಹಣ ಮತ್ತು ಕವಿಗೋಷ್ಠಿ ಕಾರ್ಯಕ್ರಮ ನಡೆಯಲಿದೆ ಎಂದು ಉಡುಪಿ ಜಿಲ್ಲಾ ಬರಹಗಾರರ ಸಂಘದ ಅಧ್ಯಕ್ಷೆ ಪುಷ್ಪ ಪ್ರಸಾದ್ ತಿಳಿಸಿದ್ದಾರೆ.

ಕಾರ್ಯಕ್ರಮವನ್ನು ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಬೆಳಗ್ಗೆ 10:30ಕ್ಕೆ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕನ್ನಡ ರಾಜ್ಯ ಬರಹಗಾರರ ಸಂಘದ ರಾಜ್ಯಾಧ್ಯಕ್ಷ ಹೂವಿನಹಡಗಲಿ ಮಧು ನಾಯ್ಕ ಲಂಬಾಣಿ, ಗಮಕಿ, ಸಾಹಿತಿ ಕೋಟ ಕೃಷ್ಣ ಅಹಿತಾನಳ, ಕನ್ನಡ ರಾಜ್ಯ ಬರಹಗಾರರ ಸಂಘದ ಪ್ರಧಾನ ಕಾರ್ಯದರ್ಶಿ ಮಹೇಶ ಎಚ್.ಎಸ್ ಹೂವಿನಹಡಗಲಿ, ಸಾಹಿತಿ ಹಾಗೂ ಕರ್ನಾಟಕ ಬ್ಯಾಂಕಿನ ನಿವೃತ್ತ ಮ್ಯಾನೇಜರ್ ಚಂದ್ರಶೇಖರ ನಾವುಡ ಇದರಲ್ಲಿ ಭಾಗವಹಿಸಲಿದ್ದಾರೆ.

ಉದ್ಘಾಟನಾ ಸಮಾರಂಭದ ಬಳಿಕ ನುಡಿವೈಭವ -2022ರ ಪ್ರಶಸ್ತಿ ವಿತರಣಾ ಸಮಾರಂಭ ಹಾಗೂ ಕವಿಗೋಷ್ಠಿ ನಡೆಯಲಿದೆ ಎಂದು ಪುಷ್ಪ ಪ್ರಸಾದ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News