ಮಹಿಳೆಯರಿಗೆ ಅಣಬೆ ಕೃಷಿ ತರಬೇತಿ ಕಾರ್ಯಾಗಾರ

Update: 2022-03-10 14:45 GMT

ಕೋಟ, ಮಾ.10: ಉಡುಪಿ ಜಿಲ್ಲಾ ಪಂಚಾಯತ್, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ, ಬ್ರಹ್ಮಾವರ ರುಡ್‌ಸೆಟ್ ಸಂಸ್ಥೆಯ ಆಶ್ರಯದಲ್ಲಿ ಸಂಜೀವಿನಿ ಸ್ವಸಹಾಯ ಸಂಘದ ಮಹಿಳೆಯರಿಗೆ ಅಣಬೆ ಕೃಷಿ ತರಬೇತಿ ಕಾರ್ಯಾಗಾರವನ್ನು ಕೋಟ ಕಾರಂತ ಥೀಮ್ ಪಾರ್ಕ್‌ನಲ್ಲಿ ಗುರುವಾರ ಆಯೋಜಿಸಲಾಗಿತ್ತು.

ಕಾರ್ಯಾಗಾರವನ್ನು ಉದ್ಘಾಟಿಸಿದ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಬಾಬು ಎಂ. ಮಾತನಾಡಿ, ಮಹಿಳೆಯರು ಇನ್ನಷ್ಟು ತರಬೇತಿ ಪಡೆಯುವ ಮೂಲಕ ಗುಂಪು ಚಟುವಟಿಕೆ ಅಥವಾ ವೈಯಕ್ತಿಕ ಉದ್ದಿಮೆ ಪ್ರಾರಂಭಿಸುವ ಮೂಲಕ ಸ್ವಾವಲಂಬನೆ ಬದುಕು ಸಾಧಿಸಬಹುದು ಎಂದು ತಿಳಿಸಿದರು.

ಅಧ್ಯಕ್ಷತೆಯನ್ನು ಕೋಟತಟ್ಟು ಸಿಂಧೂರ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಮಾಲತಿ ರವಿ ವಹಿಸಿದ್ದರು. ಅಥಿತಿಗಳಾಗಿ ಜಿಪಂ ಸಹಾಯಕ ಯೋಜನಾಧಿಕಾರಿ ಜೇಮ್ಸ್ ಡಿಸಿಲ್ವ, ಎನ್‌ಆರ್‌ಎಲ್ಎಂ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಪ್ರಭಾಕರ ಆಚಾರ್, ಕೋಟತಟ್ಟು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯರಾಮ್ ಶೆಟ್ಟಿ, ಬ್ರಹ್ಮಾವರ ರುಡ್‌ಸೆಟ್ ನಿರ್ದೇಶಕ ಪಾಪನಾಯಕ್, ಉಪನ್ಯಾಸಕ ಸಂತೋಷ್, ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕ ಕೃಷ್ಣ ಮಾತನಾಡಿದರು.

ಮುಖ್ಯ ಪುಸ್ತಕ ಬರಹಗಾರರಾದ ವಾಣಿಶ್ರೀ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ಸುಜಾತಾ ಸ್ವಾಗತಿಸಿದರು. ಶ್ಯಾಮಲಾ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News