ಮಾ. 19ಕ್ಕೆ ಮುದರಂಗಡಿಯಲ್ಲಿ ಉಡುಪಿ ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ
Update: 2022-03-17 15:59 GMT
ಉಡುಪಿ : ಈ ಬಾರಿಯ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ’ ಕಾರ್ಯಕ್ರಮ ಮಾ.19ರ ಶನಿವಾರ ಕಾಪು ತಾಲೂಕಿನ ಮುದರಂಗಡಿ ಗ್ರಾಪಂ ವ್ಯಾಪ್ತಿಯ ಗ್ರಾಮಗಳಲ್ಲಿ ನಡೆಯಲಿದೆ ಎಂದು ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆದ್ದರಿಂದ ಮುದರಂಗಡಿ ಗ್ರಾಪಂ ವ್ಯಾಪ್ತಿಯ ಸಾರ್ವಜನಿಕರು, ಗ್ರಾಮಸ್ಥರು ತಮ್ಮ ಅಹವಾಲುಗಳನ್ನು ಮುಂಚಿತವಾಗಿ ಕಾಪು ತಾಲೂಕು ಕಚೇರಿಯಲ್ಲಿ ಅಥವಾ ಸಾಂತೂರು, ಪಿಲಾರು ಗ್ರಾಮಕರಣಿಕರ ಕಚೇರಿಗಳಲ್ಲಿ ನೀಡುವಂತೆ ಅವರು ತಿಳಿಸಿದ್ದಾರೆ.