ಉಡುಪಿ: ನಗರಸಭಾ ವ್ಯಾಪ್ತಿಯಲ್ಲಿ ಬ್ಯಾನರ್, ಕಟೌಟ್ ಅಳವಡಿಕೆಗೆ ಪರವಾನಿಗೆ ಕಡ್ಡಾಯ
Update: 2022-03-22 15:24 GMT
ಉಡುಪಿ : ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ನಗರಸಭೆಯ ಅನುಮತಿ ಇಲ್ಲದೇ ಬ್ಯಾನರ್ ಹಾಗೂ ಕಟೌಟ್ ಗಳನ್ನು ಅಳವಡಿಸಿರುವ ಕುರಿತು ಸಾರ್ವಜನಿಕರಿಂದ ದೂರುಗಳು ಬರುತ್ತಿದ್ದು, ಪರವಾನಿಗೆ ಪಡೆದು ಅವಧಿ ಮುಗಿದ ಮತ್ತು ಅನಧಿಕೃತ ಬ್ಯಾನರ್ ಹಾಗೂ ಕಟೌಟ್‌ಗಳನ್ನು ಕೂಡಲೇ ತೆರವುಗೊಳಿಸಬೇಕು. ತಪ್ಪಿದಲ್ಲಿ ನಗರಸಭಾ ವತಿಯಿಂದ ಅವುಗಳನ್ನು ತೆರವು ಗೊಳಿಸಲಾಗುವುದು. ಬ್ಯಾನರ್ ಹಾಗೂ ಕಟೌಟ್‌ಗಳನ್ನು ಅಳವಡಿಸಲು ನಗರಸಭೆ ಯಿಂದ ಪರವಾನಿಗೆ ಪಡೆಯುವುದು ಕಡ್ಡಾಯ ಎಂದು ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.