ಭಟ್ಕಳ: ಮೊಗೇರ ಸಮಾಜದಿಂದ ಬೃಹತ್ ಪ್ರತಿಭಟನಾ ರ್‍ಯಾಲಿ

Update: 2022-03-23 07:09 GMT

ಭಟ್ಕಳ, ಮಾ.23: ಉತ್ತರ ಕನ್ನಡಜಿಲ್ಲೆಯ ಮೊಗೇರ ಸಮಾಜದವರಿಗೆ ನೀಡುತ್ತಿರುವ ಪ್ರವರ್ಗ 1ರ ಪ್ರಮಾಣ ಪತ್ರ ಸ್ಥಗಿತಗೊಳಿಸಿ ಈ ಹಿಂದಿನಂತೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ವಿತರಿಸಬೇಕು ಎಂದು ಆಗ್ರಹಿಸಿ ಮೊಗೇರ ಸಮಾಜದ ವತಿಯಿಂದ ಇಂದು ಭಟ್ಕಳದಲ್ಲಿ ರ್‍ಯಾಲಿ ನಡೆಯಿತು.

ವೆಂಕಟಾಪುರದಿಂದ ಪ್ರತಿಭಟನಾ ರ್‍ಯಾಲಿ ಆರಂಭಿಸಲಾಗಿದ್ದು ಮಿನಿ ವಿಧಾನಸೌಧದ ಬಳಿ ಸಮಾವೇಶಗೊಂಡು ಧರಣಿ ಸತ್ಯಾಗ್ರಹ ಆರಂಭಿಸಿದ್ದಾರೆ. 

ಮಾಜಿ ಶಾಸಕ ಮಂಕಾಳ ವೈದ್ಯ, ರಾಮ ಮೊಗೇರ, ತಾಲೂಕು ಮೊಗೇರ ಸಮಾಜದ ಅಧ್ಯಕ್ಷ ಅಣ್ಣಪ್ಪ ಮೊಗೇರ ಸೇರಿದಂತೆ ಇತರ ಮುಖಂಡರು ಭಾಗಿಯಾಗಿದ್ದಾರೆ.

ಮೊಗೇರ ಸಮಾಜದವರಿಗೆ ಈ ಹಿಂದೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡಲಾಗುತ್ತಿದ್ದು, ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದ್ದರೂ ಸರಕಾರ ಮೊಗೇರರಿಗೆ ಪ್ರಸಕ್ತ ಮನೆಮನೆ ದಾಖಲಾತಿ ಒದಗಿಸುವ ಸಂದರ್ಭದಲ್ಲಿ ಪ್ರವರ್ಗ 1ರ ಪ್ರಮಾಣ ಪತ್ರ ನೀಡಲು ಸರಕಾರ ಮುಂದಾಗಿದೆ. ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಪಡೆಯುತ್ತಿದ್ದ ಮೊಗೇರರಿಗೆ ಪ್ರವರ್ಗ 1ರಲ್ಲಿ ಪ್ರಮಾಣ ಪತ್ರ ನೀಡುವುದಕ್ಕೆ ಸಮಾಜದಿಂದ ತೀವ್ರ ವಿರೋಧವಿದೆ. ನಾವು ಈಗಾಗಲೇ ಪ್ರವರ್ಗ 1ರ ಪ್ರಮಾಣ ಪತ್ರವನ್ನು ಕಂದಾಯ ಇಲಾಖೆಗೆ ವಾಪಸ್ ನೀಡಿದ್ದೇವೆ. ನಮಗೆ ಸರಕಾರ ಪರಿಶಿಷ್ಟ ಜಾತಿ ಪ್ರಮಾಣ ಪತ್ರವನ್ನೇ ನೀಡಬೇಕು. ನಮಗೆ ನ್ಯಾಯ ಸಿಗುವವರೆಗೆ ಹೋರಾಟ ಮುಂದುವರಿಸುವುದಾಗಿ ಧರಣಿನಿರತರು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News