​ಆದಿತ್ಯನಾಥ್ ಪ್ರಮಾಣವಚನಕ್ಕೆ ಪೇಜಾವರಶ್ರೀಗಳಿಗೆ ಆಹ್ವಾನ

Update: 2022-03-23 14:19 GMT

ಉಡುಪಿ : ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಆದಿತ್ಯನಾಥ್ ಅವರು ಎರಡನೇ ಬಾರಿಗೆ ಶುಕ್ರವಾರ ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಈ ಸಮಾರಂಭದಲ್ಲಿ ಉಪಸ್ಥಿತರಿರುವಂತೆ ಅವರು ಪೇಜಾವರ ಮಠದ ಶ್ರೀವಿಶ್ವಪ್ರಸನ್ನ ತೀರ್ಥರನ್ನು ಆಹ್ವಾನಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪೇಜಾವರಶ್ರೀಗಳು ಗುರುವಾರ ಚೆನ್ನೈನ ಕಾರ್ಯಕ್ರಮಗಳನ್ನು ಮುಗಿಸಿ ಶುಕ್ರವಾರ ಬೆಳಗ್ಗೆ ವಿಮಾನ ಮೂಲಕ ಲಕ್ನೋಕ್ಕೆ ತೆರಳಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಶ್ರೀಮಠದ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News