ಉಡುಪಿ: ಗ್ರಾಮಾಭಿವೃದ್ಧಿ ಯೋಜನೆಯ ಕೇಂದ್ರ ಒಕ್ಕೂಟ ಪದಗ್ರಹಣ

Update: 2022-03-24 15:05 GMT

ಉಡುಪಿ, ಮಾ.24: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ನ ಉಡುಪಿ ತಾಲೂಕು ಕೇಂದ್ರ ಸಮಿತಿ ಒಕ್ಕೂಟ ಪದಗ್ರಹಣ ಸಮಾರಂಭ ಹಾಗೂ ಜವಾಬ್ದಾರಿಗಳ ಹಸ್ತಾಂತರ ಕಾರ್ಯಕ್ರಮ ಗುರುವಾರ ನಗರದ ಅಜ್ಜರಕಾಡಿನ ಪುರಭವನದಲ್ಲಿ ನಡೆಯಿತು.

ಉಡುಪಿ ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್ ಕಾರ್ಯಕ್ರಮ ಉದ್ಘಾಟಿಸಿ ಗ್ರಾಮಾಭಿವೃದ್ಧಿ ಯೋಜನೆ ಉಡುಪಿ ತಾಲೂಕಿಗೆ ಕಾಲಿಟ್ಟ ನಂತರ ಮಹಿಳೆಯ ರೆಲ್ಲರೂ ಆರ್ಥಿಕ ವ್ಯವಹಾರಗಳನ್ನು ನಡೆಸುತ್ತಾ ಸ್ವಾವಲಂಹಿಗಳಾದರು. ಮಹಿಳೆಯರು ಸಮಾಜದ ಮುಖ್ಯ ವಾಹಿನಿಗೆ ಬರಲಾರಂಭಿಸಿದರು. ಅದೇ ರೀತಿ ಹೆಚ್ಚಿನ ಮಹಿಳೆಯರು ಸಾಮಾಜಿಕ ಹಾಗೂ ರಾಜಕೀಯವಾಗಿ ತನ್ನನ್ನು ತೊಡಗಿಸಿಕೊಳ್ಳಲು ಗ್ರಾಮಾಭಿವೃದ್ಧಿ ಯೋಜನೆ ದಾರಿದೀಪವಾಗಿದೆ ಎಂದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಉಡುಪಿ ಜಿಲ್ಲೆಯ ಹಿರಿಯ ನಿರ್ದೇಶಕ ಗಣೇಶ್ ಬಿ ಮಾತನಾಡಿ, ಸದಸ್ಯರ ಮನೆ ಬಾಗಿಲಿಗೆ ಕ್ಷೇತ್ರದ ಸೌಲಭ್ಯಗಳು ಸಿಗಬೇಕು ಎನ್ನುವ ದೃಷ್ಠಿಯಿಂದ ಗ್ರಾಮಾಭಿವೃದ್ಧಿ ಯೋಜನೆ ಕೆಲಸ ಮಾಡುತ್ತಿದೆ. ರಾಜ್ಯಾದ್ಯಂತ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ಅತೀ ಹೆಚ್ಚು ಪ್ರಗತಿನಿಧಿ ಪಡೆದು ಮರುಪಾವತಿ ವಾಡುತ್ತಿರುವ ಜಿಲ್ಲೆ ಉಡುಪಿ ಎಂದರು.

ಉಡುಪಿ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿ ವೀಣಾ ವಿವೇಕಾನಂದ ಸರಕಾರದಿಂದ ಸಿಗುವ ಸೌಲಭ್ಯಗಳ ಕುರಿತು ಮಾಹಿತಿ ನೀಡಿ ದರು.ಉಡುಪಿ ನಗರ ಠಾಣೆಯ ಪೋಲೀಸ್ ನಿರೀಕ್ಷಕರು ಪ್ರಮೋದ್ ಕುಮಾರ್, ನಿಕಟಪೂರ್ವ ಅಧ್ಯಕ್ಷೆ ಶೀಲಾ, ತಾಲೂಕಿನ ನೂತನ ಕೇಂದ್ರ ಸಮಿತಿ ಅಧ್ಯಕ್ಷೆ ಶಮಿತ ಪಿ ಶೆಟ್ಟಿ ಮಾತನಾಡಿದರು.

ಅಧ್ಯಕ್ಷತೆಯನ್ನು ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷ ನವೀನ್ ಅಮೀನ್ ವಹಿಸಿದ್ದರು. ಕಾರ್ಯಕ್ರಮದಲ್ಲಿ ತಾಲೂಕಿನ ನಿಕಟಪೂರ್ವ ಅಧ್ಯಕ್ಷರು, ಪದಾಧಿಕಾರಿಗಳು, ನೂತನ ಅಧ್ಯಕ್ಷರು, ಪದಾಧಿಕಾರಿಗಳು, ತಾಲೂಕಿನ ಯೋಜನಾಧಿಕಾರಿ ರಾಮ ಎಂ. ಹಾಗೂ ಇತರರು ಭಾಗವಹಿಸಿದ್ದರು.

ಅಂಬಾಗಿಲು ವಲಯ ಮೇಲ್ವಿಚಾರಕ ಜಯಕರ ಕಾರ್ಯಕ್ರಮ ನಿರೂಪಿ ಸಿದರೆ, ತಾಲೂಕು ಯೋಜನಾಧಿಕಾರಿ ರಾಮ ಎಂ. ಸ್ವಾಗತಿಸಿದರು. ಕೃಷಿ ಮೇಲ್ವಿಚಾರಕ ರಾಘವೇಂದ್ರ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News