ಉಚಿತ ಪಡಿತರ ಯೋಜನೆ ಇನ್ನೂ 3 ತಿಂಗಳು ವಿಸ್ತರಿಸಲು ಉತ್ತರಪ್ರದೇಶ ಸರಕಾರ ನಿರ್ಧಾರ

Update: 2022-03-26 08:27 GMT

ಲಕ್ನೋ: ಉತ್ತರ ಪ್ರದೇಶದ  ಆದಿತ್ಯನಾಥ್ ಸರಕಾರ ತನ್ನ ಉಚಿತ ಪಡಿತರ ಯೋಜನೆಯನ್ನು ಮೂರು ತಿಂಗಳವರೆಗೆ ವಿಸ್ತರಿಸಲು ನಿರ್ಧರಿಸಿದೆ. ನಿನ್ನೆ ಎರಡನೇ ಬಾರಿಗೆ ಉತ್ತರಪ್ರದೇಶ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಆದಿತ್ಯನಾಥ್ ಅವರ ಅಧ್ಯಕ್ಷತೆಯಲ್ಲಿ ನಡೆದ ಮೊದಲ ಸಂಪುಟ ಸಭೆಯಲ್ಲಿ ಶನಿವಾರ  ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.

ಶನಿವಾರ  ನಡೆದ ಸಚಿವ ಸಂಪುಟ ಸಭೆಯಲ್ಲಿ ಉಚಿತ ಪಡಿತರ ಯೋಜನೆಯನ್ನು ಮುಂದಿನ 3 ತಿಂಗಳವರೆಗೆ ವಿಸ್ತರಿಸಲು ನಿರ್ಧರಿಸಿದ್ದೇವೆ. ಇದರಿಂದ ರಾಜ್ಯದ 15 ಕೋಟಿ ಜನರಿಗೆ ಅನುಕೂಲವಾಗಲಿದೆ ಎಂದು ಮುಖ್ಯಮಂತ್ರಿ ಹೇಳಿದರು.

ಈ ಯೋಜನೆಗಾಗಿ ಸರಕಾರ 3,270 ಕೋಟಿ ರೂ. ವೆಚ್ಚ ಮಾಡಲಿದೆ ಎಂದು ಉಪಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಹೇಳಿದರು.

ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ಆರಂಭಿಸಲಾದ ಉಚಿತ ಪಡಿತರ ಯೋಜನೆಯು ಮಾರ್ಚ್‌ನಲ್ಲಿ ಮುಕ್ತಾಯಗೊಳ್ಳಬೇಕಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News