ಎಸಿಬಿಯಿಂದ ಅಹವಾಲು ಸ್ವೀಕಾರ

Update: 2022-03-26 14:58 GMT

ಉಡುಪಿ : ಉಡುಪಿ ಭ್ರಷ್ಟಾಚಾರ ನಿಗ್ರಹ ದಳ ಪೋಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿ  ಮಾ.29ರಂದು ಕುಂದಾಪುರ ಪ್ರವಾಸಿ ಮಂದಿರ ಮತ್ತು ಮಾ.30ರಂದು ಕಾರ್ಕಳ ಪ್ರವಾಸಿ ಮಂದಿರದಲ್ಲಿ ಬೆಳಗ್ಗೆ ೧೧ ರಿಂದ ಸಂಜೆ ೪:೩೦ರವರೆಗೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ.

ಸಾರ್ವಜನಿಕ ನೌಕರ ತನ್ನ ದಿನನಿತ್ಯದ ಕೆಲಸಗಳನ್ನು ನಿರ್ವಹಿಸಲು ಅನಗತ್ಯ ವಿಳಂಬ ಮಾಡಿದಲ್ಲಿ, ನಿರ್ಲಕ್ಷ್ಯತೆ ತೋರಿದಲ್ಲಿ ಅಥವಾ ಲಂಚ ಕೇಳಿದಲ್ಲಿ ದೂರು ಸ್ವೀಕರಿಸಲಾಗುವುದು ಎಂದು ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆಯ ಉಪಾಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News